ನವದೆಹಲಿ: ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಅವರ ಜಾಮೀನು ಅರ್ಜಿ ಸಂಬಂಧ ಸುಪ್ರೀಂ ಕೋರ್ಟ್ ಸೋಮವಾರ ಗುಜರಾತ್ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ್ದು, ವಿಚಾರಣೆಯನ್ನು ಆಗಸ್ಟ್ 25 ಕ್ಕೆ ಮುಂದೂಡಿದೆ.
ನ್ಯಾಯಮೂರ್ತಿ ಯು.ಯು.ಲಲಿತ್ ನೇತೃತ್ವದ ಪೀಠವು ಅವರ ಮನವಿಯ ಮೇರೆಗೆ ರಾಜ್ಯಕ್ಕೆ ನೋಟಿಸ್ ಜಾರಿ ಮಾಡಿದೆ. ಆಗಸ್ಟ್ 3 ರಂದು, ಗುಜರಾತ್ ಹೈಕೋರ್ಟ್ ಈ ಅರ್ಜಿಯ ಬಗ್ಗೆ ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿತು ಮತ್ತು ಈ ವಿಷಯವನ್ನು ಸೆಪ್ಟೆಂಬರ್ 19 ಕ್ಕೆ ವಿಚಾರಣೆಗೆ ನಿಗದಿಪಡಿಸಿತ್ತು.
ಸುಪ್ರೀಂ ಕೋರ್ಟ್ ಈಗ ಆಗಸ್ಟ್ 25 ರ ಗುರುವಾರ ಈ ವಿಷಯವನ್ನು ಆಲಿಸಲಿದೆ. ಸೆಟಲ್ವಾಡ್ ಪರವಾಗಿ ಹಿರಿಯ ವಕೀಲ ಕಪಿಲ್ ಸಿಬಲ್ ವಾದ ಮಂಡಿಸಿದರು.
2002ರ ಗಲಭೆಯಲ್ಲಿ ನರೇಂದ್ರ ಮೋದಿ ಅವರಿಗೆ ಕ್ಲೀನ್ ಚಿಟ್ ನೀಡಿದ ನಂತರ ಸಾಕ್ಷ್ಯಾಧಾರಗಳನ್ನು ಸೃಷ್ಟಿಸಿದ ಆರೋಪದಲ್ಲಿ ಸೆಟಲ್ವಾಡ್ ಮತ್ತು ಮಾಜಿ ಪೊಲೀಸ್ ಮಹಾನಿರ್ದೇಶಕ ಆರ್.ಬಿ.ಶ್ರೀಕುಮಾರ್ ಅವರನ್ನು ಜೂನ್ ನಲ್ಲಿ ಬಂಧಿಸಲಾಗಿತ್ತು.