35 ಸಾವಿರ ಉರಗಗಳ ರಕ್ಷಿಸಿದ್ದ ಸ್ನೇಕ್ ಲೋಕೇಶ್ ಹಾವು ಕಡಿತದಿಂದ ಸಾವು

Prasthutha|

ಬೆಂಗಳೂರು: ರಾಜ್ಯಾದ್ಯಂತ ಹೆಸರು ಮಾಡಿದ್ದ ಉರಗ ರಕ್ಷಕ ಸ್ನೇಕ್ ಲೋಕೇಶ್ ಹಾವು ಕಡಿತದಿಂದ ನಗರದಲ್ಲಿ ಸಾವನ್ನಪ್ಪಿದ್ದಾರೆ.

- Advertisement -

ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ ಸ್ನೇಕ್ ಲೋಕೇಶ್ ಕೊನೆಯುಸಿರೆಳೆದಿದ್ದಾರೆ. ನೆಲಮಂಗಲ ತಾಲೂಕಿನ ಡಾಬಸ್ ಪೇಟೆಯಲ್ಲಿ ಕಳೆದ ಜು.17ರಂದು ಸ್ನೇಕ್ ಲೋಕೇಶ್ ಅವರ ಬಲಗೈ ಬೆರಳಿಗೆ ರಕ್ಷಿಸಲು ಹೋದ ವಿಷಪೂರಿತ ನಾಗರಹಾವು ಕಚ್ಚಿತ್ತು.

ಕೂಡಲೇ ಅವರನ್ನು ನೆಲಮಂಗಲದ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ತುರ್ತು ಚಿಕಿತ್ಸೆ ಕೊಡಿಸಿ ಮಣಿಪಾಲ್ ಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೂ ಸ್ನೇಕ್ ಲೋಕೇಶ್ ಅವರು, 35 ಸಾವಿರಕ್ಕೂ ಹೆಚ್ಚು ವಿವಿಧ ಜಾತಿಯ ಉರಗಗಳು, ಪ್ರಾಣಿ, ಪಕ್ಷಿಗಳನ್ನು ರಕ್ಷಣೆ ಮಾಡಿದ್ದಾರೆ.

- Advertisement -

ಸಂಗೀತದಲ್ಲಿ ಸಾಕಷ್ಟು ಆಸಕ್ತಿ ಹೊಂದಿದ್ದ ಅವರು, ಕೆಲವು ಧಾರವಾಹಿ, ಕೆಲ ಚಿತ್ರಗಳಲ್ಲಿ ಕೂಡ ನಟಿಸಿದ್ದಾರೆ. ನೆಲಮಂಗಲದಲ್ಲಿ ಪುಟ್ಟ ಹೋಟೆಲ್ ಇಟ್ಟುಕೊಂಡು ಜೀವನ ನಡೆಸುತ್ತಿದ್ದರು. ಆದರೆ ದುರದೃಷ್ಟವಶಾತ್ ಹಾವು ಕಡಿತದಿಂದ ಚಿಕಿತ್ಸೆ ಫಲಕಾರಿಯಾಗದೇ ಇಂದು ಸಾವನಪ್ಪಿದ್ದಾರೆ.



Join Whatsapp