ಪ್ರವಾದಿ ಮುಹಮ್ಮದ್ ವಿರುದ್ಧ ಅವಮಾನಕರ ಹೇಳಿಕೆ : ಬಿಜೆಪಿ ಶಾಸಕ ರಾಜಾ ಸಿಂಗ್ ಬಂಧನ

Prasthutha|

ಹೈದರಾಬಾದ್: ಪ್ರವಾದಿ ಮುಹಮ್ಮದ್ ವಿರುದ್ಧ ಅವಮಾನಕರ ಹೇಳಿಕೆ ನೀಡಿದ ಆರೋಪದ ಮೇಲೆ ಬಿಜೆಪಿ ಶಾಸಕ ರಾಜಾ ಸಿಂಗ್ ಅವರನ್ನು ಹೈದರಾಬಾದ್ ಪೊಲೀಸರು ಮಂಗಳವಾರ ವಶಕ್ಕೆ ಪಡೆದಿದ್ದಾರೆ.

- Advertisement -

ಹೈದರಾಬಾದ್ ದಕ್ಷಿಣ ವಲಯ ಪೊಲೀಸರು ಮಂಗಳವಾರ ಬೆಳಿಗ್ಗೆ ರಾಜಾ ಸಿಂಗ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153 ಎ, 295 ಮತ್ತು 505 ರ ಅಡಿಯಲ್ಲಿ ದಬೀರ್ಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ.

ಸೋಮವಾರ ತಡರಾತ್ರಿ ಶ್ರೀ ರಾಮ್ ಚಾನೆಲ್ ತೆಲಂಗಾಣದಲ್ಲಿ ಹಂಚಿಕೊಂಡ ವೀಡಿಯೊಂದರಲ್ಲಿ ಪ್ರವಾದಿ ಮುಹಮ್ಮದ್ ವಿರುದ್ಧ ಅವಮಾನಕರ ಹೇಳಿಕೆ ನೀಡಿದ  ಆರೋಪದ ಮೇಲೆ ಬಿಜೆಪಿ ಶಾಸಕ ಟಿ ರಾಜಾ ಸಿಂಗ್ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಸೋಮವಾರ ತಡರಾತ್ರಿ ಹೈದರಾಬಾದ್ ನ ಕೆಲವು ಭಾಗಗಳಲ್ಲಿ ಪ್ರತಿಭಟನೆಗಳು ಭುಗಿಲೆದ್ದಿದ್ದವು. ನಗರ ಪೊಲೀಸ್ ಆಯುಕ್ತರ ಕಚೇರಿ ಮುಂದೆ ಜಮಾಯಿಸಿದ ಪ್ರತಿಭಟನಾಕಾರರು ಬಿಜೆಪಿ ಶಾಸಕರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದರು.



Join Whatsapp