ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ವಕ್ತಾರ ಸ್ಥಾನಕ್ಕೆ ಜೈವೀರ್ ಶೆರ್ಗಿಲ್ ರಾಜೀನಾಮೆ

Prasthutha|

ನವದೆಹಲಿ: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ವಕ್ತಾರ ಸ್ಥಾನಕ್ಕೆ ಜೈವೀರ್ ಶೆರ್ಗಿಲ್ ಬುಧವಾರ ರಾಜೀನಾಮೆ ನೀಡಿದ್ದಾರೆ.

- Advertisement -

ಜೈವೀರ್ ಶೆರ್ಗಿಲ್ ಅವರು ಕಾಂಗ್ರೆಸ್ ಮಧ್ಯಂತರ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ರಾಜೀನಾಮೆ ಪತ್ರ ಬರೆದಿದ್ದಾರೆ.

ನಿರ್ಣಯಗಳು ಸಾರ್ವಜನಿಕ ಮತ್ತು ದೇಶದ ಹಿತಾಸಕ್ತಿಗಳಿಗಾಗಿ ಅಲ್ಲ ಎಂದು ಹೇಳಲು ನನಗೆ ನೋವಾಗಿದೆ ಎಂದು ಪತ್ರದಲ್ಲಿ ಶೆರ್ಗಿಲ್ ಹೇಳಿದ್ದಾರೆ.

- Advertisement -


ಸುಪ್ರೀಂಕೋರ್ಟ್ ನಲ್ಲಿ ವಕೀಲರಾಗಿರುವ ಶೆರ್ಗಿಲ್ ಪಕ್ಷದ ಕಾರ್ಯಕರ್ತರಿಗೆ ಕಾನೂನು ಸಹಾಯ ನೀಡುವುದಕ್ಕಾಗಿ 24x 7 ಕಾನೂನು ಸಹಾಯಿ ಟೋಲ್ ಫ್ರೀ ಸಹಾಯವಾಣಿ ಆರಂಭಿಸಿ ಸುದ್ದಿಯಾಗಿದ್ದರು.



Join Whatsapp