ಮಂಗಳೂರು: ಬಂಗಾಲ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮ ಕರಾವಳಿಯಲ್ಲಿ ಮಳೆ ಬಿರುಸು ಪಡೆದಿದ್ದು, ದಕ್ಷಿಣ ಕನ್ನಡ, ಉಡುಪಿ, ಜಿಲ್ಲೆಯಲ್ಲಿ ಬುಧವಾರ ದಿನವಿಡೀ ಭಾರಿ ಮಳೆಯಾಗಿದೆ.
ಮಂಗಳೂರು ನಗರ ಹಾಗೂ ಗ್ರಾಮಾಂತರ ಭಾಗದಲ್ಲಿ ಮಂಗಳವಾರ ತಡರಾತ್ರಿಯೇ ಆರಂಭಗೊಂಡ ಮಳೆ ಬುಧವಾರ ದಿನವಿಡೀ ಉತ್ತಮವಾಗಿ ಸುರಿದಿದೆ. ನಗರದ ಕೆಲವು ತಗ್ಗು ಪ್ರದೇಶಗಳಲ್ಲಿ ಕೃತಕ ನೆರೆ ಆವರಿಸಿದೆ.
ವೀರಕಂಭ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಜ್ಜೊನಿ ಎಂಬಲ್ಲಿ ರಸ್ತೆಗೆ ಮರ ಬಿದ್ದು ಕೆಲ ಹೊತ್ತು ಸಂಚಾರಕ್ಕೆ ಅಡಚಣೆಯಾದ ಘಟನೆ ಕೂಡ ನಡೆದಿದೆ.