ಕೊಡಗಿನಲ್ಲಿ ಇನ್ನೂ 3 ದಿನ‌ ನಿಷೇಧಾಜ್ಞೆ

Prasthutha|

ಕೊಡಗು: ಜಿಲ್ಲೆಯಲ್ಲಿ ಎರಡು ಪಕ್ಷಗಳ ಮೊಟ್ಟೆ ಜಗಳದಿಂದ ಪರಿಸ್ಥಿತಿಯು ಬೂದಿಮುಚ್ಚಿದ ಕೆಂಡದಂತಿದ್ದು ಮುಂಜಾಗ್ರತಾ ಕ್ರಮವಾಗಿ ಎಡಿಜಿಪಿ ಅಲೋಕ್ ಕುಮಾರ್​ ನೇತೃತ್ವದಲ್ಲಿ ಮಡಿಕೇರಿಯ ಕುಶಾಲನಗರ, ವಿರಾಜಪೇಟೆ, ಸೋಮವಾರ ಪೇಟೆ, ಪೊನ್ನಂಪೇಟೆ ಭಾಗದಲ್ಲಿ ಕೂಡ ಪಥಸಂಚಲನ ಮಾಡಿ ನಿಮ್ಮ ಜೊತೆ ನಾವಿದ್ದೇವೆ. ಭಯ ಪಡುವ ಅಗತ್ಯ ಇಲ್ಲ ಎಂದು ಸಾರ್ವಜನಿಕರಿಗೆ ಧೈರ್ಯ ತುಂಬಿದರು.

- Advertisement -


ವಿಪಕ್ಷ ನಾಯಕ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಪ್ರಕರಣದ ಬಳಿಕ ಕಾಂಗ್ರೆಸ್​ ಮತ್ತು ಬಿಜೆಪಿ ಪಕ್ಷಗಳು ಒಳಗೊಳಗೆ ಕೆಂಡ ಕಾರುತ್ತಿವೆ. ಜಿಲ್ಲೆಯ ಜನರ ಹಿತದೃಷ್ಟಿಯಿಂದ ಎರಡು ಪಕ್ಷಗಳ ಗಲಾಟೆಗೆ ಬ್ರೇಕ್ ಹಾಕಿರುವ ಜಿಲ್ಲಾಡಳಿತ ಸೆಕ್ಷನ್ 144 ಜಾರಿ ಮಾಡಿದೆ. ಸಭೆ, ಸಮಾರಂಭ, ಪ್ರತಿಭಟನೆ ನಡೆಯದಂತೆ ಮೂರು ದಿನಗಳ ಕಾಲ ನಿರ್ಬಂಧ ಹೇರಲಾಗಿದೆ.

ಈ ಹಿಂದೆ ವಿಧಿಸಲಾಗಿದ್ದ ನಿಷೇಧಾಜ್ಞೆ ಇಂದು ಕೊನೆಯಾಗಬೇಕಿದ್ದು, ಮುಂಜಾಗ್ರತಾ ಕ್ರಮವಾಗಿ ಮುಂದುವರಿಸಲಾಗಿದೆ.

ಜಿಲ್ಲೆಯಲ್ಲಿ ಒಟ್ಟು 20 ಚೆಕ್​ಪೋಸ್ಟ್​ಗಳಲ್ಲಿ ತಪಾಸಣೆ ಮಾಡಲಾಗುತ್ತಿದ್ದು, ಮಡಿಕೇರಿಯಲ್ಲೇ 16 ಚೆಕ್ ಪೋಸ್ಟ್ ನಿರ್ಮಿಸಲಾಗಿದೆ. ಕಿಡಿಗೇಡಿಗಳಿಂದ ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಈಗಾಗಲೇ ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ.



Join Whatsapp