ಭಾರತದ 49ನೇ ಮುಖ್ಯ ನ್ಯಾಯಮೂರ್ತಿಯಾಗಿ ಯು.ಯು.ಲಲಿತ್ ಪ್ರಮಾಣ ವಚನ ಸ್ವೀಕಾರ

Prasthutha|

ನವದೆಹಲಿ: ಸುಪ್ರೀಂ ಕೋರ್ಟ್ 49ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ಉದಯ್ ಉಮೇಶ್ ಲಲಿತ್ ಶನಿವಾರ ಪ್ರಮಾಣ ವಚನ ಸ್ವೀಕರಿಸಿದರು.

- Advertisement -

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬೆಳಿಗ್ಗೆ ರಾಷ್ಟ್ರಪತಿ ಭವನದಲ್ಲಿ ನ್ಯಾಯಮೂರ್ತಿ ಲಲಿತ್ ಅವರಿಗೆ ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಬೋಧಿಸಿದರು.

ಆಗಸ್ಟ್ 26 ರಂದು ನಿವೃತ್ತರಾದ ನ್ಯಾಯಮೂರ್ತಿ ಎನ್.ವಿ.ರಮಣ ಅವರ ನಂತರದ ಉತ್ತರಾಧಿಕಾರಿಯಾಗಿರುವ ನ್ಯಾ. ಯು ಯು ಲಲಿತ್  ವಕೀಲ ವರ್ಗದಿಂದ ನೇರವಾಗಿ ಸರ್ವೋಚ್ಚ ನ್ಯಾಯಾಲಯಕ್ಕೆ ಪದೋನ್ನತಿ ಪಡೆದ ಎರಡನೇ ಸಿಜೆಐ ಆಗಿದ್ದಾರೆ.

- Advertisement -

ನ್ಯಾಯಮೂರ್ತಿ ಲಲಿತ್ ಅವರು ಭಾರತದ ನ್ಯಾಯಾಂಗದ ಮುಖ್ಯಸ್ಥರಾಗಿ 74 ದಿನಗಳ ಅಲ್ಪಾವಧಿಯ ಅಧಿಕಾರಾವಧಿಯನ್ನು ಹೊಂದಿದ್ದು, ನವೆಂಬರ್ 8 ರಂದು ಅಧಿಕಾರದಿಂದ ನಿರ್ಗಮಿಸಲಿದ್ದಾರೆ.

ನ್ಯಾಯಮೂರ್ತಿ ರಮಣ ಅವರ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದ ನ್ಯಾಯಮೂರ್ತಿ ಲಲಿತ್ ಅವರು, ಸುಮಾರು ಮೂರು ತಿಂಗಳ ಅಧಿಕಾರಾವಧಿಯಲ್ಲಿ ಅವರು ಮೂರು ಪ್ರಮುಖ ಕ್ಷೇತ್ರಗಳತ್ತ ಗಮನ ಹರಿಸಲಿದ್ದಾರೆ ಮತ್ತು ಪ್ರಕರಣಗಳ ಪಟ್ಟಿಯನ್ನು ಸರಳ, ಸ್ಪಷ್ಟ ಮತ್ತು ಸಾಧ್ಯವಾದಷ್ಟು ಪಾರದರ್ಶಕಗೊಳಿಸುವುದು ತಮ್ಮ ಪ್ರಮುಖ ಆದ್ಯತೆಗಳಲ್ಲಿ ಒಂದಾಗಿದೆ ಎಂದು ಹೇಳಿದರು.



Join Whatsapp