ರಾಜ್ಯ ಶಿಕ್ಷಣ ಇಲಾಖೆಯಲ್ಲಿ ಲಂಚಾವತಾರ: ಪ್ರಧಾನಿಗೆ ಪತ್ರ ಬರೆದ ಸಂಘಟನೆಗಳು

Prasthutha|

ಬೆಂಗಳೂರು: ಕರ್ನಾಟಕದ ಕನಿಷ್ಠ 13,000 ಖಾಸಗಿ ಶಾಲೆಗಳನ್ನು ಪ್ರತಿನಿಧಿಸುವ ಎರಡು ಸಂಘಗಳು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಭ್ರಷ್ಟಾಚಾರ ನಡೆಸುತ್ತಿದೆ ಎಂದು ಆರೋಪಿಸಿವೆ.

- Advertisement -

ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲೆಗಳ ಅಸೋಸಿಯೇಟೆಡ್ ಮ್ಯಾನೇಜ್ಮೆಂಟ್ಸ್ ಮತ್ತು ನೋಂದಾಯಿತ ಅನುದಾನರಹಿತ ಖಾಸಗಿ ಶಾಲೆಗಳ ಮ್ಯಾನೇಜ್ಮೆಂಟ್ ಅಸೋಸಿಯೇಷನ್ ಶಿಕ್ಷಣ ಸಂಸ್ಥೆಗಳಿಗೆ ಮಾನ್ಯತೆ ಪ್ರಮಾಣಪತ್ರಗಳನ್ನು ನೀಡಲು ರಾಜ್ಯ ಶಿಕ್ಷಣ ಇಲಾಖೆ ಲಂಚ ಕೇಳುತ್ತಿದೆ ಎಂಬ ಆರೋಪದ ಬಗ್ಗೆ ಪರಿಶೀಲಿಸುವಂತೆ ಒತ್ತಾಯಿಸಿ ಪ್ರಧಾನಿ ಮೋದಿಯವರಿಗೆ ಪತ್ರ ಬರೆದಿದ್ದಾರೆ.

ಅವೈಜ್ಞಾನಿಕ, ಅತಾರ್ಕಿಕ, ತಾರತಮ್ಯ ಮತ್ತು ಹೊಂದಾಣಿಕೆಯಾಗದ ನಿಯಮಗಳನ್ನು ಅನುದಾನರಹಿತ ಖಾಸಗಿ ಶಾಲೆಗಳಿಗೆ ಮಾತ್ರ ಅನ್ವಯಿಸಲಾಗುತ್ತದೆ ಮತ್ತು ಭಾರಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

- Advertisement -

ರಾಜ್ಯ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರಿಗೆ ಅನೇಕ ದೂರುಗಳು ಮತ್ತು ಮನವಿಗಳು ಸಲ್ಲಿಸಿದ್ದರೂ ಯಾವುದೇ ಪ್ರತಿಕ್ರಿಯೆ ನೀಡುತ್ತಿಲ್ಲ ಎಂದು ಸಂಘಗಳು ಆರೋಪಿಸಿವೆ



Join Whatsapp