ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರಕ್ಕೆ ಬಿಜೆಪಿ ಸರ್ಕಾರವೇ ಕಾರಣ: ಕೇಜ್ರಿವಾಲ್

Prasthutha|

ನವದೆಹಲಿ: ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರಕ್ಕೆ ಬಿಜೆಪಿ ಸರ್ಕಾರವೇ ಕಾರಣ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಶನಿವಾರ ಆರೋಪಿಸಿದ್ದಾರೆ.

- Advertisement -


ಈ ಕುರಿತು ಶನಿವಾರ ಟ್ವೀಟ್ ಮಾಡಿರುವ ಅವರು, ‘ಮೊಸರು, ಮಜ್ಜಿಗೆ, ಜೇನುತುಪ್ಪ, ಗೋಧಿ, ಅಕ್ಕಿ ಮುಂತಾದವುಗಳ ಮೇಲೆ ವಿಧಿಸಿರುವ ಜಿಎಸ್ ಟಿಯಿಂದ ಕೇಂದ್ರ ಸರ್ಕಾರಕ್ಕೆ ವಾರ್ಷಿಕ 7,500 ಕೋಟಿ ಆದಾಯ ಬರುತ್ತದೆ. ಸರ್ಕಾರಗಳನ್ನು ಉರುಳಿಸಲು ಬಿಜೆಪಿ ಇಲ್ಲಿಯವರೆಗೆ 6,300 ಕೋಟಿ ಖರ್ಚು ಮಾಡಿದೆ. ಈ ಸರ್ಕಾರಗಳು ಉರುಳದೇ ಹೋಗಿದ್ದರೆ ಗೋಧಿ, ಅಕ್ಕಿ, ಮಜ್ಜಿಗೆ ಇತ್ಯಾದಿಗಳ ಮೇಲೆ ಜಿಎಸ್ ಟಿ ಹೇರಿಕೆಯಾಗುತ್ತಲೇ ಇರಲಿಲ್ಲ. ಜನರು ಹಣದುಬ್ಬರವನ್ನು ಎದುರಿಸಬೇಕಾಗಿರಲಿಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.


ದೆಹಲಿ ಸರ್ಕಾರವನ್ನು ಉರುಳಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಅರವಿಂದ ಕೇಜ್ರಿವಾಲ್ ಆರೋಪಿಸಿದ್ದಾರೆ. ದೇಶದಲ್ಲಿ ಹಲವು ಸರ್ಕಾರಗಳನ್ನು ಉರುಳಿಸಿರುವ ಬಿಜೆಪಿ ಈ ವರೆಗೆ 277 ಶಾಸಕರನ್ನು ಖರೀದಿಸಿರುವುದಾಗಿ ಹೇಳಿದ್ದಾರೆ. ಅಲ್ಲದೆ, ದೆಹಲಿಯ 40 ಶಾಸಕರ ಖರೀದಿಗೆ 800 ಕೋಟಿ ಖರ್ಚು ಮಾಡಲೂ ಬಿಜೆಪಿ ಯೋಜಿಸಿತ್ತು ಎಂದು ಆರೋಪಿಸಿದರು.



Join Whatsapp