ಮಂಗಳೂರು ತಾಲೂಕು ಬಿಲ್ಲವ ಸಂಘ ಅಸ್ತಿತ್ವಕ್ಕೆ

Prasthutha|

ಮಂಗಳೂರು: ಮಂಗಳೂರು ತಾಲೂಕು ಬಿಲ್ಲವ ಸಂಘವು ಸ್ಥಾಪನೆಯಾಗಿದ್ದು ಸೆಪ್ಟೆಂಬರ್ 4ನೇ ತಾರೀಕಿನಂದು ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದ ಕೊರಗಪ್ಪ ಸಭಾಂಗಣದಲ್ಲಿ ಬೆಳಿಗ್ಗೆ 10 ಗಂಟೆಗೆ ಅಧಿಕೃತವಾಗಿ ಉದ್ಘಾಟನೆ ಆಗಲಿದೆ ಎಂದು ಅಧ್ಯಕ್ಷ ಜಿತೇಂದ್ರ ಜೆ. ಸುವರ್ಣ ತಿಳಿಸಿದರು.

- Advertisement -

ಮಾಜಿ ಕೇಂದ್ರ ಮಂತ್ರಿ ಜನಾರ್ದನ ಪೂಜಾರಿ ಮತ್ತು ಮಾಜಿ ಶಾಸಕ ವಸಂತ ಬಂಗೇರ ಅವರು ಉದ್ಘಾಟನೆ ಮಾಡುವರು.

ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಸುನಿಲ್ ಕುಮಾರ್, ಪರಿಷತ್ ವಿಪಕ್ಷ ನಾಯಕ ಬಿ. ಕೆ. ಹರಿಪ್ರಸಾದ್ ಮೊದಲಾದವರು ಕಾರ್ಯಕ್ರಮದಲ್ಲಿ ಭಾಗವಹಿಸುವರು ಎಂದವರು ತಿಳಿಸಿದರು.

- Advertisement -

ಪತ್ರಿಕಾಗೋಷ್ಠಿಯಲ್ಲಿ ರಂಜನ್ ಮಿಜಾರ್, ಸುರೇಶ್ಚಂದ್ರ ಕೋಟ್ಯಾನ್, ಪಾರ್ವತಿ ಅಮೀನ್, ಲೋಕನಾಥ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.



Join Whatsapp