ಖಾಸಗಿ ಸ್ಥಳದಲ್ಲಿ ಸಾಮೂಹಿಕ ನಮಾಝ್ ಮಾಡಿದ 26 ಮಂದಿಯ ವಿರುದ್ಧ FiR ದಾಖಲು

Prasthutha|

ಮೊರಾದಾಬಾದ್: ಇತರರಿಗೆ ತೊಂದರೆಯಾಗುವಂತೆ ಸಾಮೂಹಿಕ ನಮಾಝ್ ಮಾಡಿದ್ದಾರೆ ಎಂದು ಆರೋಪಿಸಿ 26 ಜನರ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

- Advertisement -

ಉತ್ತರ ಪ್ರದೇಶದ ಮೊರಾದಾಬಾದ್ ಜಿಲ್ಲೆಯ ಧುಲೆಪುರ ಗ್ರಾಮದಲ್ಲಿ ಈ ಘಟನೆ ಸಂಭವಿಸಿದ್ದು,, ಈ ಪ್ರದೇಶದ ಮನೆ ವಠಾರದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲು ನೆರೆಹೊರೆಯ ನಿವಾಸಿಗಳು ಆಕ್ಷೇಪ ವ್ಯಕ್ತಪಡಿಸಿ , ದೂರು ದಾಖಲಿಸಿದ ಹಿನ್ನೆಲೆಯಲ್ಲಿ ಪೊಲೀಸರು ಎಫ್ ಐ ಆರ್ ದಾಖಲಿಸಿದ್ದಾರೆ.

ಚಾಜ್ಲೈಟ್ ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆ ಸೆಕ್ಷನ್ 505 (ಸಾರ್ವಜನಿಕ ಕಿಡಿಗೇಡಿತನ) 505 (2) (ವರ್ಗಗಳ ನಡುವೆ ದ್ವೇಷ, ದ್ವೇಷ ಅಥವಾ ದ್ವೇಷವನ್ನು ಸೃಷ್ಟಿಸುವ ಅಥವಾ ಉತ್ತೇಜಿಸುವ ಹೇಳಿಕೆಗಳು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

- Advertisement -

ಸಾರ್ವಜನಿಕ ಸ್ಥಳಗಳಲ್ಲಿ‌‌ ನಮಾಝ್ ನಿರ್ವಹಿಸಬಾರದೆಂದು ಈ ಹಿಂದೆಯೇ ಎಚ್ಚರಿಕೆ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಎಫ್ ಐ ಆರ್ ದಾಖಸಿದ್ದೇವೆ ಎಂದು ಪೊಲೀಸರು ತಿಳಿಸಿದರು. ಆದರೆ ನಮಾಝ್ ನಡೆದ ಸ್ಥಳ ಸಯ್ಯದ್ ಎಂಬವರ ಖಾಸಗಿ ಸ್ಥಳವಾಗಿದ್ದರೂ 26 ಮಂದಿಯ ಮೇಲೆ‌ ಪ್ರಕರಣ ದಾಖಲಿಸಲಾಗಿದೆ.



Join Whatsapp