ಉತ್ತರ ಪ್ರದೇಶ: ಸಚಿವ ಸ್ಥಾನಕ್ಕೆ ಭೂಪೇಂದ್ರ ಚೌಧರಿ ರಾಜೀನಾಮೆ

Prasthutha|

ನವದೆಹಲಿ: ಉತ್ತರ ಪ್ರದೇಶ ಪಂಚಾಯತ್ ರಾಜ್ ಸಚಿವ ಭೂಪೇಂದ್ರ ಚೌಧರಿ  ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇತ್ತೀಚೆಗೆ ಭಾರತೀಯ ಜನತಾ ಪಕ್ಷದ ಉತ್ತರ ಪ್ರದೇಶ ಘಟಕದ ಹೊಸ ಅಧ್ಯಕ್ಷರಾಗಿ ಆಯ್ಕೆಯಾಗಿದ್ದ ಹಿನ್ನೆಲೆಯಲ್ಲಿ ಅವರು ರಾಜೀನಾಮೆ ನೀಡಿದ್ದಾರೆ.

- Advertisement -

ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ ಹಾಕಿರುವ ಚೌಧರಿ,  ಭಾರತೀಯ ಜನತಾ ಪಕ್ಷದ ರಾಜ್ಯ ಅಧ್ಯಕ್ಷರ ಜವಾಬ್ದಾರಿ ವಹಿಸಿಕೊಂಡ ಕಾರಣಕ್ಕಾಗಿ ಇಂದು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ.ಮೊದಲ ಮತ್ತು ಎರಡನೇ ಅವಧಿಯಲ್ಲಿ ರಾಜ್ಯ ಸಚಿವ ಮತ್ತು ಕ್ಯಾಬಿನೆಟ್ ದರ್ಜೆ ಮಂತ್ರಿಯಾಗಿ ರಾಜ್ಯದ ಜನರಿಗೆ ಸೇವೆ ಸಲ್ಲಿಸಲು ಅವಕಾಶ ನೀಡಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಧನ್ಯವಾದ ಎಂದು ತಿಳಿಸಿದ್ದಾರೆ.

ಆಗಸ್ಟ್ 25 ರಂದು ಭೂಪೇಂದ್ರ ಸಿಂಗ್ ಚೌಧರಿ ಅವರನ್ನು ಉತ್ತರ ಪ್ರದೇಶ ಬಿಜೆಪಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು.



Join Whatsapp