ಶೃಂಗೇರಿ: ತಾಲೂಕು ಮಟ್ಟದ ಕ್ರೀಡಾಕೂಟ; ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರ ಮೇಲುಗೈ

Prasthutha|

ಚಿಕ್ಕಮಗಳೂರು: ಶೃಂಗೇರಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಇತ್ತೀಚೆಗೆ ನಡೆದ ಪದವಿ ಪೂರ್ವ ಕಾಲೇಜುಗಳ ತಾಲೂಕು ಮಟ್ಟದ ಕ್ರೀಡಾ ಕೂಟದಲ್ಲಿ ಕ್ರೀಡಾಕೂಟದಲ್ಲಿ ಅತ್ಯುತ್ತಮ ಸಾಧನೆಗೈಯ್ಯುವ ಮೂಲಕ ಸಮಗ್ರ ಪ್ರಶಸ್ತಿಯನ್ನು ಪಡೆದಿದ್ದಾರೆ.
ಕಾಲೇಜಿನ ವಿದ್ಯಾರ್ಥಿನಿ ಮಂದಾರ ವೈಯಕ್ತಿಕ ಪ್ರಶಸ್ತಿಯನ್ನು ಸಹ ತಮ್ಮದಾಗಿಸಿಕೊಂಡಿದ್ದಾರೆ.

- Advertisement -

ಕ್ರೀಡಾಕೂಟದಲ್ಲಿ ಉತ್ತಮ ಸಾಧನೆ ಮಾಡಿರುವ ವಿದ್ಯಾರ್ಥಿಗಳನ್ನು ಕಾಲೇಜಿನ ಪ್ರಾಚಾರ್ಯರು ವಿಜೇತ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಗೌರವಿಸಿ ಈ ರೀತಿಯ ಇನ್ನೂ ಹೆಚ್ಚಿನ ಸಾಧನೆಗಳನ್ನು ಮಾಡುವಂತೆ ಪ್ರಶಂಸಿಸಿದ್ದಾರೆ.

ಈ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಅರುಣ್ ಕುಮಾರ್ ಹಿರಿಯ ಉಪನ್ಯಾಸಕಿ ಪೂರ್ಣಿಮಾ, ಕ್ರೀಡಾ ಸಂಚಾಲಕರಾದ ಡಾ. ಶ್ರೀಮಂದಾರ, ಕ್ರೀಡಾ ಸಮಿತಿಯ ಸದಸ್ಯರಾದ ಝರೀನಾ, ವಾಸುದೇವ್, ಕಾಲೇಜಿನ ಉಪನ್ಯಾಸಕರಾದ ಮಂಜುನಾಥ್, ಆದರ್ಶ, ಅಮಿತಾ, ಸ್ಮಿತಾ ಮತ್ತು ನವ್ಯ ಉಪಸ್ಥಿತರಿದ್ದರು.



Join Whatsapp