ಮೈಸೂರು: ತುಂಬು ಗರ್ಭಿಣಿಯೊಬ್ಬರು ಹಂದಿ ಜ್ವರಕ್ಕೆ ಬಲಿಯಾದ ಘಟನೆ ಮೈಸೂರಿನಲ್ಲಿ ನಡೆದಿದೆ.
ಹುಣಸೂರು ತಾಲೂಕು ಕೋಣನಹೊಸಹಳ್ಳಿ ಗ್ರಾಮದ ಸ್ವಾಮಿನಾಯ್ಕ ಎಂಬುವರ ಪುತ್ರಿ ಛಾಯಾ ಮೃತಪಟ್ಟವರು ಎಂದು ಗುರುತಿಸಲಾಗಿದೆ.
ಛಾಯಾಗೆ 4 ವರ್ಷದ ಗಂಡು ಮಗು ಇದೆ. 2ನೇ ಮಗುವಿನ ನಿರೀಕ್ಷೆಯಲ್ಲಿ ಕುಟುಂಬವಿತ್ತು. 9 ತಿಂಗಳ ಗರ್ಭಿಣಿಯಾಗಿದ್ದ ಛಾಯಾಗೆ ಎಚ್1ಎನ್1 ಸೋಂಕು ತಗುಲಿತ್ತು. ಬಳಿಕ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಗುರುವಾರ ಮೃತಪಟ್ಟಿದ್ದಾರೆ.