ಮುರುಘಾ ಶ್ರೀ ಗೆ 14 ದಿನಗಳ ನ್ಯಾಯಾಂಗ ಬಂಧನ: ಜೈಲಿನಿಂದ ಆಸ್ಪತ್ರೆಗೆ ಶಿಫ್ಟ್!

Prasthutha|

ಚಿತ್ರದುರ್ಗ: ಅಪ್ರಾಪ್ತ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರನ್ನು ನ್ಯಾಯಾಧೀಶರು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

- Advertisement -


ಗುರುವಾರ ರಾತ್ರಿ 10 ಗಂಟೆಗೆ ಮುರುಘಾ ಶರಣರನ್ನು ವಶಕ್ಕೆ ಪಡೆದುಕೊಂಡ ಪೊಲೀಸರು, ಮಧ್ಯರಾತ್ರಿ 2 ಗಂಟೆಗೆ 1ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ನ ನ್ಯಾಯಾಧೀಶೆ ಹಾಗೂ ಮ್ಯಾಜಿಸ್ಟ್ರೇಟ್ ಕೋಮಲಾ ಅವರ ಮುಂದೆ ಹಾಜರುಪಡಿಸಿದರು. ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ವಿಚಾರಣೆಗಾಗಿ ಮುರುಘಾ ಶರಣರನ್ನು 10 ದಿನಗಳ ಅವಧಿಗೆ ತಮ್ಮ ವಶಕ್ಕೆ ನೀಡಬೇಕು ಎಂದು ಕೋರಿ ಪೊಲೀಸರು ನ್ಯಾಯಾಲಯಕ್ಕೆ ಶುಕ್ರವಾರ ಮನವಿ ಮಾಡುವ ಸಾಧ್ಯತೆಯಿದೆ.


ಇನ್ನು ಮುರುಘಾ ಶ್ರೀ ಗೆ ಬೆಳಗಿನ ಜಾವ ಎದೆ ನೋವು ಕಾಣಿಸಿಕೊಂಡಿದ್ದು, ಈ ಹಿನ್ನೆಲೆ ಜೈಲಿನಿಂದ ಜಿಲ್ಲಾ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

- Advertisement -


ಎದೆ ನೋವಿನಿಂದ ಶ್ರೀಗಳು ಜೈಲಿನಲ್ಲಿ ಕುಸಿದು ಬಿದಿದ್ದರು ಎಂದು ತಿಳಿದು ಬಂದಿದೆ. ಬಿಳಿ ಮುಸುಕಿನೊಂದಿಗೆ ಜೈಲಿನಿಂದ ಬಂದ ಶ್ರೀಗಳು ಪೊಲೀಸ್ ವಾಹನವೇರಿ ಪೊಲಿಸ್ ಸಿಬ್ಬಂದಿಯ ಜೊತೆಗೆ ಜಿಲ್ಲಾ ಆಸ್ಪತ್ರೆಗೆ ತೆರಳಿದ್ದಾರೆ.




Join Whatsapp