ಮಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಅಲ್ಲಿಂದ ಹೆಲಿಕಾಪ್ಟರ್ ನಲ್ಲಿ ಕುಳೂರಿಗೆ ಆಗಮಿಸಿ, ಕಾರಿನಲ್ಲಿ ಗೋಲ್ಡ್ ಪಿಂಚ್ ಮೈದಾನಕ್ಕೆ ಆಗಮಿಸಿದರು.
ಇಂದು 3,800 ಕೋಟಿ ವೆಚ್ಚದ ಯೋಜನೆಗಳಿಗೆ ಮೋದಿ ಮಂಗಳೂರಿನಲ್ಲಿ ಚಾಲನೆ ನೀಡಲಿದ್ದಾರೆ.
ಮೋದಿ ಜೊತೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ, ಕೇಂದ್ರ ಸಂಸದೀಯ ವ್ಯವಹಾರಗಳು ಮತ್ತು ಕಲ್ಲಿದ್ದಲು ಸಚಿವರಾದ ಪ್ರಲ್ಹಾದ್ ಜೋಶಿ, ಕೇಂದ್ರ ಬಂದರು, ಹಡಗು ಮತ್ತು ಜಲಸಾರಿಗೆ ಹಾಗೂ ಆಯುಷ್ ಸಚಿವರಾದ ಸರ್ಬಾನಂದ್ ಸೊನೊವಾಲ್, ಕೇಂದ್ರ ಇಂಧನ ಮತ್ತು ನೈಸರ್ಗಿಕ ಅನಿಲ ಸಚಿವರಾದ ಹರ್ದೀಪ್ ಸಿಂಗ್ ಪುರಿ, ಕೇಂದ್ರ ಬಂದರು, ಹಡಗು ಮತ್ತು ಜಲಸಾರಿಗೆ ರಾಜ್ಯ ಸಚಿವರಾದ ಶ್ರೀಪಾದ್ ಯೆಸ್ಸೊ ನಾಯಕ್, ಕೇಂದ್ರ ಬಂದರು, ಹಡಗು ಮತ್ತು ಜಲಸಾರಿಗೆ ರಾಜ್ಯ ಸಚಿವರಾದ ಶಂತನು ಠಾಕೂರ್ ಸೇರಿದಂತೆ ರಾಜ್ಯದ ಸಚಿವರು ಇದ್ದರು.