ಚಿತ್ರದುರ್ಗ: ಶಿವಮೂರ್ತಿ ಸ್ವಾಮಿಯ ಅನುಪಸ್ಥಿತಿಯಲ್ಲಿ ಮುರುಘಾ ಮಠದ ತಾತ್ಕಾಲಿಕ ಪೀಠಾಧಿಪತಿಯಾಗಿ ದಾವಣಗೆರೆ ತಾಲೂಕಿನ ಹೆಬ್ಬಾಳು ವಿರಕ್ತ ಮಠದ ಮಹಾಂತರುದ್ರ ಸ್ವಾಮೀಜಿ ಅವರನ್ನು ನೇಮಕ ಮಾಡಲಾಗಿದೆ.
ಮಠದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಮಠದ ಎಸ್ಜೆಎಂ ವಿದ್ಯಾಪೀಠದ ಕಾರ್ಯದರ್ಶಿ ಹುದ್ದೆಗೆ ನಿವೃತ್ತ ನ್ಯಾಯಧೀಶ ಎಸ್.ಬಿ. ವಸ್ತ್ರದಮಠ ಅವರನ್ನು ನೇಮಕ ಮಾಡಲಾಗಿದೆ’ ಎಂದು ಮಠದ ಮೂಲಗಳು ಮಾಹಿತಿ ನೀಡಿವೆ.
ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಶಿವಮೂರ್ತಿ ಸ್ವಾಮಿಗೆ ವಿಚಾರಣಾಧೀನ ಕೈದಿ ಸಂಖ್ಯೆ 2261 ನೀಡಲಾಗಿದೆ.