ಆನೇಕಲ್: ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರದ ಮುಂದೆ ಪ್ರೇಮಿಗಳು ಮದುವೆಯಾದ ಘಟನೆ ಆನೇಕಲ್ ಪಟ್ಟಣದಲ್ಲಿ ನಡೆದಿದೆ.
ಆನೇಕಲ್ ನ ಯುವಕ ವಿರೇಶ್ ಹಾಗೂ ಬಾಗಲಕೋಟೆ ಮೂಲದ ಅನುಪಮಾ ಇಬ್ಬರೂ ಹತ್ತು ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಇವರ ಪ್ರೀತಿಗೆ ಎರಡೂ ಕುಟುಂಬಸ್ಥರಿಂದಲೂ ವಿರೋಧ ವ್ಯಕ್ತವಾಗಿತ್ತು. ಹಾಗಾಗಿ ಆನೇಕಲ್ ಪಟ್ಟಣದ ಡಾ.ಅಂಬೇಡ್ಕರ್ ಪ್ರತಿಮೆ ಬಳಿ ದಲಿತ ಮುಖಂಡರುಗಳ ಸಮ್ಮುಖದಲ್ಲಿ ಬೌದ್ಧ ಧರ್ಮದ ಸಂಪ್ರದಾಯದಂತೆ ವಿವಾಹವಾಗಿದ್ದಾರೆ.