ಮಹಿಳೆಯ ಮೇಲೆ ಲಿಂಬಾವಳಿ ದರ್ಪ: ಇದೇನಾ ಬಿಜೆಪಿಯ ಸ್ತ್ರೀಗೌರವದ ಸಂಸ್ಕೃತಿ?-ಕಾಂಗ್ರೆಸ್ ಕಿಡಿ

Prasthutha|

ಬೆಂಗಳೂರು: ಅಹವಾಲು ಹೇಳಿಕೊಳ್ಳಲು ಬಂದ ಮಹಿಳೆಯ ಮೇಲೆ ದರ್ಪ ತೋರಿದ ಶಾಸಕ ಅರವಿಂದ್ ಲಿಂಬಾವಳಿಯ ವರ್ತನೆಯು ಬಿಜೆಪಿಯ ಜನವಿರೋಧಿ ಧೋರಣೆ, ದುರಹಂಕಾರ ಪರಮಾವಧಿಗೆ ತಲುಪಿರುವುದಕ್ಕೆ ಸಾಕ್ಷಿ. ಜನತೆಯ ಮೇಲೆ ದರ್ಪ ತೋರಿದ ಮಾತ್ರಕ್ಕೆ ನಿಮ್ಮ ಅಯೋಗ್ಯತನ ಮರೆಯಾಗುವುದಿಲ್ಲ ಎಂದು ಕಾಂಗ್ರೆಸ್ ಗುಡುಗಿದೆ.

- Advertisement -


ಬೊಮ್ಮಾಯಿಯವರೇ, ನಿಮ್ಮ ಶಾಸಕರ ಈ ವರ್ತನೆ ನಿಮಗೆ ಸಹ್ಯವೇ? ಮಾಧುಸ್ವಾಮಿ ಮಹಿಳೆಯನ್ನು ನಿಂದಿಸಿದ್ದರು. ಸಿದ್ದು ಸವದಿ ಮಹಿಳೆಗೆ ಹಲ್ಲೆ ಮಾಡಿದ್ದರು. ರಮೇಶ್ ಜಾರಕಿಹೊಳಿ ಉದ್ಯೋಗ ಕೇಳಿದಾಕೆಯನ್ನು ಮಂಚ ಹತ್ತಿಸಿದ್ದರು. ಅರಗ ಜ್ಞಾನೇಂದ್ರ ಅತ್ಯಾಚಾರ ಸಂತ್ರಸ್ತೆಯದ್ದೇ ತಪ್ಪು ಎಂದಿದ್ದರು. ಇದೀಗ ಅರವಿಂದ ಲಿಂಬಾವಳಿ ಮಹಿಳೆಯ ಮೇಲೆ ದರ್ಪ ಮೆರೆದರು. ಇದೇನಾ ಬಿಜೆಪಿಯ ಸ್ತ್ರೀಗೌರವದ ಸಂಸ್ಕೃತಿ? ಎಂದು ಕರ್ನಾಟಕ ಕಾಂಗ್ರೆಸ್ ಟ್ವೀಟ್ ಮೂಲಕ ಕಿಡಿಕಾರಿದೆ.

ಮಹಿಳೆಯ ಮೇಲೆ ದಬ್ಬಾಳಿಕೆ ಎಸಗಿದ್ದಲ್ಲದೆ “ನಾನೇನು ರೇಪ್ ಮಾಡಿದ್ನಾ” ಎಂದು ಉದ್ಧಟತನದಲ್ಲಿ ಕೇಳಿದ ಅರವಿಂದ್ ಲಿಂಬಾವಳಿ ಅವರ ಮಾತುಗಳು ಇಡೀ ಬಿಜೆಪಿ ಸಂಸ್ಕೃತಿಗೆ ಹಿಡಿದ ಕನ್ನಡಿ.

- Advertisement -

ಲಿಂಬಾವಳಿಯ ಈ ಮಾತುಗಳು ಇಡೀ ಸ್ತ್ರೀ ಕುಲಕ್ಕೆ ಮಾಡಿದ ಘೋರ ಅವಮಾನ. ಇಂತಹ ಕೊಳಕು ಮನಸ್ಥಿತಿಯ ಶಾಸಕನ ವಿರುದ್ಧ ಕ್ರಮ ಕೈಗೊಳ್ಳದೆ ಸಿಎಂ ಮೌನವಹಿಸಿರುವುದು ಏಕೆ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.



Join Whatsapp