ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಕಾರು: ಕೂದಳೆಲೆ ಅಂತರದಲ್ಲಿ ಪಾರಾದ ಪಾದಚಾರಿ ಮಹಿಳೆ; ವೀಡಿಯೋ ವೈರಲ್

Prasthutha|

ನವದೆಹಲಿ: ಪಾದಚಾರಿ ಮಹಿಳೆಯೊಬ್ಬರು ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಕಾರೊಂದು ಅಲ್ಲೇ ನಿಂತಿದ್ದ ಆಟೋ ರಿಕ್ಷಾವೊಂದಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡಿದಿದ್ದು, ಮಹಿಳೆ ಕೂದಳೆಲೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಘಟನೆ ನಡೆದಿದೆ.

- Advertisement -

ಪಾದಚಾರಿ ಮಹಿಳೆಯೊಬ್ಬರು ರಸ್ತೆಯನ್ನು ದಾಟುತ್ತಿದ್ದ ವೇಳೆ ಅತಿ ವೇಗದಿಂದ ಬಂದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ನಿಂತಿದ್ದ ಆಟೋ ರಿಕ್ಷಾವೊಂದಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ಆಟೋ ರಿಕ್ಷಾ ಪಲ್ಟಿಯಾಗಿದ್ದು, ಕಾರು ರಸ್ತೆಯ ಡಿವೈಡರ್ ಗೆ ಅಪ್ಪಳಿಸಿದೆ. ಈ ವೇಳೆ ಮಹಿಳೆ ಅಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದು, ರಸ್ತೆಯ ಇನ್ನೊಂದು ಭಾಗಕ್ಕೆ ಓಡಿ ಜೀವ ಉಳಿಸಿಕೊಂಡಿದ್ದಾರೆ.




Join Whatsapp