►ಪರಿವರ್ತನಾ ಸಂಕಲ್ಪ ಸಮಾವೇಶದಲ್ಲಿ ಗುಜರಾತ್ ಜನತೆಗೆ ರಾಹುಲ್ ಗಾಂಧಿ ನೀಡಿದ ಇನ್ನಷ್ಟು ‘ಉಚಿತ’ ಭರವಸೆಗಳೇನು ನೋಡಿ
ಅಹಮದಾಬಾದ್: ಗುಜರಾತ್ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಗುಜರಾತ್ ಜನತೆಗೆ ಭರಪೂರ ಭರವಸೆಗಳನ್ನು ನೀಡಿದ್ದಾರೆ.
ಅಹಮದಾಬಾದ್ನ ಸಾಬರಮತಿ ನದಿಯ ಮುಂಭಾಗದಲ್ಲಿ ನಡೆದ ‘ಪರಿವರ್ತನ್ ಸಂಕಲ್ಪ ರ್ಯಾಲಿ’ಯಲ್ಲಿ ಕಾಂಗ್ರೆಸ್ನ ಬೂತ್ ಮಟ್ಟದ ಕಾರ್ಯಕರ್ತರನ್ನುದ್ದೇಶಿಸಿ ರಾಹುಲ್ ಗಾಂಧಿ ಮಾತನಾಡುತ್ತಿದ್ದರು.
ಗುಜರಾತ್ನಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ‘ಉಚಿತ’ಗಳ ಸರಮಾಲೆಯನ್ನೇ ಘೋಷಿಸಿದ ಗಾಂಧಿ, ರೈತರಿಗೆ ಉಚಿತ ವಿದ್ಯುತ್, ಹೆಣ್ಣುಮಕ್ಕಳಿಗೆ ಉಚಿತ ಶಿಕ್ಷಣವನ್ನು ನೀಡುವುದಾಗಿ ಭರವಸೆ ನೀಡಿದರು. ಅಲ್ಲದೇ ಸಾಮಾನ್ಯ ಗ್ರಾಹಕರಿಗೆ 300 ಯೂನಿಟ್ಗಳವರೆಗೆ ಉಚಿತ ವಿದ್ಯುತ್ ಪೂರೈಸುವುದಾಗಿ ಘೋಷಿಸಿದರು.
ಇನ್ನು 3,000 ಇಂಗ್ಲಿಷ್ ಮಾಧ್ಯಮ ಶಾಲೆಗಳನ್ನು ನಿರ್ಮಿಸುವುದಾಗಿ ಮತ್ತು ಸಾಮಾನ್ಯ ಗ್ರಾಹಕರಿಗೆ 300 ಯೂನಿಟ್ಗಳವರೆಗೆ ಉಚಿತ ವಿದ್ಯುತ್ ಪೂರೈಸುವುದಾಗಿ ಭರವಸೆ ನೀಡಿದ ಗಾಂಧಿ, 500 ರೂ. ಗೆ ಗ್ಯಾಸ್ ಸಿಲಿಂಡರ್ ನೀಡುವುದಾಗಿಯೂ, 10 ಲಕ್ಷ ಹೊಸ ಉದ್ಯೋಗ ಸೃಷ್ಟಿಸುವುದಾಗಿಯೂ ಹೇಳಿಕೊಂಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ‘ಉಚಿತ ಕೊಡುಗೆ’ಗಳು ದೇಶಕ್ಕೆ ಅಪಾಯಕಾರಿ ಎಂದು ಹೇಳಿದ ಬೆನ್ನಲ್ಲೇ ರಾಹುಲ್ ಗಾಂಧಿ ಈ ‘ಉಚಿತ’ ಭರವಸೆಗಳನ್ನು ನೀಡಿದ್ದಾರೆ.