ಬ್ರಿಟನ್ | ಗೃಹ ಕಾರ್ಯದರ್ಶಿ ಹುದ್ದೆ ತೊರೆದ ಭಾರತೀಯ ಮೂಲದ ಪ್ರೀತಿ ಪಟೇಲ್

Prasthutha|

ಬ್ರಿಟನ್: ಲಿಝ್ ಟ್ರಸ್ ಅವರು ಬ್ರಿಟನ್’ನ ನೂತನ ಪ್ರಧಾನಿಯಾಗಿ ಆಯ್ಕೆಗೊಂಡ ಬೆನ್ನಲ್ಲೇ ಭಾರತೀಯ ಮೂಲದ ಪ್ರೀತಿ ಪಟೇಲ್ ಅವರು ಗೃಹ ಕಾರ್ಯದರ್ಶಿ ಹುದ್ದೆಯನ್ನು ತೊರೆಯುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ.

- Advertisement -

ಇದಕ್ಕೆ ಸಂಬಂಧಿಸಿದಂತೆ ನಿರ್ಗಮಿತ ಪ್ರಧಾನಿ ಬೋರಿಸ್ ಜಾನ್ಸನ್ ಅವರಿಗೆ ತನ್ನ ರಾಜೀನಾಮೆ ಪತ್ರವನ್ನು ರವಾನಿಸಿರುವ ಪ್ರೀತಿ, ನೂತನ ಪ್ರಧಾನಿ ಲಿಝ್ ಟ್ರಸ್ ಅವರಿಗೆ ಸಂಪೂರ್ಣ ಬೆಂಬಲವನ್ನು ನೀಡುವುದಾಗಿ ತಿಳಿಸಿದ್ದಾರೆ.

ಜಾನ್ಸನ್ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಪಟೇಲ್ ಅವರು, ನೂತನ ಪ್ರಧಾನಿ ಅವರೊಂದಿಗೆ ಕೆಲಸ ಮುಂದುವರಿಸುವ ಅನುಮಾನ ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿತ್ತು.

- Advertisement -

ನೂತನ ಪ್ರಧಾನಿ ಲಿಝ್ ಅವರನ್ನು ಅಭಿನಂದಿಸಿದ ಪಟೇಲ್, ನೂತನ ಪ್ರಧಾನಿಯನ್ನು ಸಂಪೂರ್ಣವಾಗಿ ಬೆಂಬಲಿಸುವುದಾಗಿ ತನ್ನ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.

ಲಿಝ್ ಅವರ ಪಟ್ಟಾಭಿಷೇಕದ ಬಳಿಕ ನೂತನ ಗೃಹ ಕಾರ್ಯದರ್ಶಿ ಸ್ಥಾನಕ್ಕೆ ನೇಮಕಾತಿ ಆದ ನಂತರ ದೇಶ ಮತ್ತು ವಿವಿಧ ಕ್ಷೇತ್ರದ ಜನರ ಸೇವೆಯಲ್ಲಿ ಮುಂದುವರಿಯುತ್ತೇನೆ. ಹಿಂದಿನ ಸರ್ಕಾರದ ಉನ್ನತ ಹುದ್ದೆಯಲ್ಲಿದ್ದುಕೊಂಡು ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದೇನೆ ಎಂದು ತಿಳಿಸಿದ್ದಾರೆ.

ಈ ಮಧ್ಯೆ ಪಟೇಲ್ ಅವರ ಸ್ಥಾನಕ್ಕೆ ಭಾರತದವರೇ ಆದ ಸುವೆಲ್ಲಾ ಬ್ರೇವ್’ಮನ್ ಅವರನ್ನು ಆಯ್ಕೆ ಮಾಡುವ ಸಾಧ್ಯತೆಯಿದೆ.



Join Whatsapp