ಹಳ್ಳದಲ್ಲಿ ಕೊಚ್ಚಿಹೋದ ಇಬ್ಬರು ಪೊಲೀಸರ ಪತ್ತೆಗೆ ಶೋಧ

Prasthutha|

ಕೊಪ್ಪಳ: ಜಿಲ್ಲೆಯಲ್ಲಿ ವರುಣನ ಅಬ್ಬರ ಮುಂದುವರೆದಿದ್ದು ಗದಗ ಜಿಲ್ಲೆ ಗಜೇಂದ್ರಗಡಕ್ಕೆ ಬಂದೋಬಸ್ತ್ ಗೆ ತೆರಳಿದ್ದ ಇಬ್ಬರು ಇಬ್ಬರು ಪೊಲೀಸರು ಹಳ್ಳದಲ್ಲಿ ಕೊಚ್ಚಿಕೊಂಡು ಹೋಗಿರುವ ದಾರುಣ ಘಟನೆ ಯಲಬುರ್ಗಾ ತಾಲೂಕಿನ ಬಂಡಿಹಾಳ ಗ್ರಾಮದ ಬಳಿ ನಡೆದಿದೆ

- Advertisement -

ರೈತರ ಪ್ರತಿಭಟನೆ ಹಿನ್ನೆಲೆಯಲ್ಲಿ ಭದ್ರತೆಗೆ ತೆರಳಿದ್ದ ಮುಂಡರಗಿ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ಮಹೇಶ್ ಮತ್ತು ನಿಂಗಪ್ಪ ಅವರು ನಿನ್ನೆ ರಾತ್ರಿ ಹಿಂದಿರುಗುವಾಗ ಹಳ್ಳದಲ್ಲಿ ಕೊಚ್ಚಿಹೋಗಿದ್ದಾರೆ.

ಸದ್ಯ ಇಬ್ಬರು ಹುಡುಕಾಟದಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿಗಳು ನಿರತರಾಗಿದ್ದಾರೆ.

- Advertisement -

ಗದಗ ಜಿಲ್ಲೆಯ ಗಜೇಂದ್ರ ಗಡದಲ್ಲಿ ರೈತರು ಪ್ರತಿಭಟನೆ ಹಮ್ಮಿಕೊಂಡಿದ್ದರು. ಇಲ್ಲಿ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಮುಂಡರಗಿ ಪೊಲೀಸ್ ಠಾಣೆಯ ಪೇದೆಗಳಾದ ಮಹೇಶ್ ಹಾಗೂ ನಿಂಗಪ್ಪ ಅವರನ್ನು ಕಳುಹಿಸಲಾಗಿತ್ತು. ಪ್ರತಿಭಟನೆ ಮುಕ್ತಾಯದ ನಂತರ ವಾಪಸ್ಸಾಗುತ್ತಿದ್ದ ವೇಳೆ ಇಬ್ಬರು ನಿನ್ನೆ ತಡರಾತ್ರಿ ಹಳದಲ್ಲಿ ಹರಿಯುತ್ತಿದ್ದ ನೀರಿಗೆ ಸಿಲುಕಿ ಕೊಚ್ಚಿ ಹೋಗಿದ್ದಾರೆ. ಸದ್ಯ ಇಬ್ಬರಿಗಾಗಿ ಶೋಧಕಾರ್ಯ ಮುಂದುವರೆದಿದೆ.

ಕೊಪ್ಪಳ ತಾಲೂಕಿನ ಕಿನ್ನಾಳ ಬಳಿ ಇರುವ ಹಿರೇಹಳ್ಳ ಡ್ಯಾಂನಿಂದ ಅಪಾರ ಪ್ರಮಾಣದಲ್ಲಿ ನೀರನ್ನು ಹೊರಕ್ಕೆ ಬಿಡಲಾಗಿದೆ. ನಿರಂತರ ಮಳೆಯ ಪರಿಣಾಮ ನೀರಿನ ಒಳಹರಿವು ಹೆಚ್ಚಾಗಿದ್ದು, ನಾಲ್ಕು ಗೇಟ್ ಮೂಲಕ ನೀರು ಬಿಡುಗಡೆ ಮಾಡಲಾಗಿದೆ. ನೀರಿನ ಪ್ರಮಾಣ ಹೆಚ್ಚಾದ ಹಿನ್ನಲೆ ಅಕ್ಕ ಪಕ್ಕದ ಜಮೀನುಗಳಿಗೂ ನೀರು ನುಗ್ಗಿದ್ದು, ಕೋಳುರ ಬಳಿ ಇರುವ ಬ್ರಿಡ್ಜ್ ಕಂ ಬ್ಯಾರೇಜ್ ಪಕ್ಕದ ಜಮೀನಿನ ಮಣ್ಣು ಕುಸಿತಗೊಂಡಿದೆ. ನಿರಂತರವಾಗಿ ಮಣ್ಣು ಕುಸಿಯುತ್ತಿರುವ ಪರಿಣಾಮ ಕೋಳುರ, ಕಾಟ್ರಳ್ಳಿ ಭಾಗದ ರೈತರಲ್ಲಿ ಆತಂಕ ಮನೆ ಮಾಡಿದೆ. ಇದರೊಂದಿಗೆ ಜನಮೀನುಗಳಿಗೆ ನೀರು ನುಗ್ಗುವ ಆತಂಕವೂ ಎದುರಾಗಿದೆ.




Join Whatsapp