ಜೈಲಿನಲ್ಲಿ ಹದಗೆಟ್ಟ ಅತೀಕುರ್ರಹ್ಮಾನ್ ಆರೋಗ್ಯ: ಇಂಡಿಯನ್ ಅಮೇರಿಕನ್ ಮುಸ್ಲಿಂ ಕೌನ್ಸಿಲ್ ಕಳವಳ

Prasthutha|

ನವದೆಹಲಿ: 2020ರಲ್ಲಿ ಹತ್ರಾಸ್ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣ ಸಂಬಂಧ ಅಲ್ಲಿಗೆ ತೆರಳುತ್ತಿದ್ದ ಸಂದರ್ಭ ಬಂಧನಕ್ಕೊಳಗಾದ ವಿದ್ಯಾರ್ಥಿ ನಾಯಕ ಅತೀಕುರ್ರಹ್ಮಾನ್ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದ್ದು, ಅವರಿಗೆ ಚಿಕಿತ್ಸೆ ನಿರಾಕರಿಸಿ ಮತ್ತೆ ಜೈಲಿಗೆ ಕಳುಹಿಸಿರುವುದಕ್ಕೆ ಇಂಡಿಯನ್ ಅಮೇರಿಕನ್ ಮುಸ್ಲಿಂ ಕೌನ್ಸಿಲ್ ತೀವ್ರ ಕಳವಳ ವ್ಯಕ್ತಪಡಿಸಿದೆ.

- Advertisement -

ಈ ಕುರಿತಂತೆ ಟ್ವೀಟ್ ಮಾಡಿರುವ ಇಂಡಿಯನ್ ಅಮೇರಿಕನ್ ಮುಸ್ಲಿಂ ಕೌನ್ಸಿಲ್, ‘ಉತ್ತರ ಪ್ರದೇಶದ ಹಿಂದುತ್ವ ತೀವ್ರಗಾಮಿ ಸರಕಾರವು 2020 ರಲ್ಲಿ ಸುಳ್ಳು ಮತ್ತು ಕಪೋಲಕಲ್ಪಿತ ಆರೋಪದ ಮೇಲೆ ಬಂಧಿಸಿದ್ದ ಸಾಮಾಜಿಕ ಕಾರ್ಯಕರ್ತ ಅತಿಕುರ್ರಹ್ಮಾನ್ ಅವರ ಆರೋಗ್ಯ ಹದಗೆಡುತ್ತಿರುವ ಬಗ್ಗೆ IAMC ಆಳವಾದ ಕಳವಳವನ್ನು ವ್ಯಕ್ತಪಡಿಸುತ್ತದೆ’ ಎಂದು‌ ಹೇಳಿದೆ.

ಉತ್ತರ ಪ್ರದೇಶ ಸರಕಾರದ ಈ ಶೋಷಣೆಯನ್ನು IAMC ಖಂಡಿಸಿದ್ದು, ಅವರನ್ನು ತಕ್ಷಣ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದೆ.



Join Whatsapp