ಸೆ.12ರಿಂದ ಸುಪ್ರೀಂಕೋರ್ಟ್ ನಲ್ಲಿ ವಿವಾದಿತ ಸಿಎಎ, ಎನ್ ಆರ್ ಸಿ ವಿರುದ್ಧದ ಅರ್ಜಿಗಳ ವಿಚಾರಣೆ

Prasthutha|

ನವದೆಹಲಿ: ವಿವಾದಿತ ಸಿಎಎ/ಎನ್ ಆರ್ ಸಿಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಹಲವು ಅರ್ಜಿಗಳ ವಿಚಾರಣಯನ್ನು ಸೆಪ್ಟಂಬರ್ 12ರಂದು ಕೈಗೆತ್ತಿಕೊಳ್ಳುವುದಾಗಿ ಸುಪ್ರೀಂಕೋರ್ಟ್ ತಿಳಿಸಿದೆ.

- Advertisement -

ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್ ಅವರ ನೇತೃತ್ವದ ಪೀಠ ಸೆ.12ರಂದು ಈ ಅರ್ಜಿಗಳ ವಿಚಾರಣೆ ನಡೆಸಲಿದೆ ಎಂದು ತಿಳಿದುಬಂದಿದೆ.

ಸಿ. ಎ. ಎ – ಸಿಟಿಜೆನ್ ಶಿಪ್ ಅಮೆಂಡಮೆಂಟ್ ಆಕ್ಟ್ ಅಂದರೆ ಪೌರತ್ವ ಮಸೂದೆ ಕಾಯಿದೆ. 2019 ರಲ್ಲಿ ತಿದ್ದುಪಡಿಯಾದ ಕಾನೂನು. ಪಾಕಿಸ್ತಾನ, ಅಪಘಾನಿಸ್ತಾನ ಮತ್ತು ಬಾಂಗ್ಲಾದೇಶಗಳ ಪೌರತ್ವ ಹೊಂದಿರುವ ಅಲ್ಪಸಂಖ್ಯಾತ ಸಮುದಾಯಗಳಾದ ಹಿಂದೂ, ಸಿಖ್, ಬೌದ್ಧ,ಜೈನ, ಪಾರ್ಸಿ ಮತ್ತು ಕ್ರಿಶ್ಚಿಯನ್ ಅವರ ಧರ್ಮದ ಆಧಾರದ ಮೇಲೆ ಕಿರುಕುಳಕ್ಕೊಳಗಾಗಿರುವವರನ್ನು ಭಾರತ ಪೌರತ್ವ ನೀಡಿ ಅವರನ್ನು ನಮ್ಮ ದೇಶದ ಪ್ರಜೆಗಳಾಗಿ ಎಲ್ಲ ರೀತಿಯ ಮೂಲಭೂತ ಹಕ್ಕುಗಳನ್ನು ನೀಡುವುದಾಗಿದೆ.

- Advertisement -

ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಯು ಯು ಲಲಿತ್ ಮತ್ತು ನ್ಯಾ. ಎಸ್ ರವೀಂದ್ರ ಭಟ್ ಅವರನ್ನೊಳಗೊಂಡ ಪೀಠ ಪ್ರಕರಣದ ವಿಚಾರಣೆ ನಡೆಸಲಿದೆ.

ಕಾಯಿದೆಯ ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆಗಳು ನಡೆದಿದ್ದವು. ಇದರ ನಡುವೆ, 2020ರ ಜನವರಿಯಲ್ಲಿ ಸುಪ್ರೀಂ ಕೋರ್ಟ್ ಕಾಯಿದೆಗೆ ತಡೆ ನೀಡದೆ 140 ಕ್ಕೂ ಹೆಚ್ಚು ಅರ್ಜಿಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಿತ್ತು. ಪ್ರಕರಣವನ್ನು ಸಾಂವಿಧಾನಿಕ ಪೀಠ ವಿಚಾರಣೆ ನಡೆಸಬಹುದು ಎಂದು ನ್ಯಾಯಾಲಯ ನಂತರ ಸುಳಿವು ನೀಡಿತ್ತು, ಆದರೆ ಆ ನಿಟ್ಟಿನಲ್ಲಿ ಯಾವುದೇ ಆದೇಶವನ್ನು ನೀಡಿರಲಿಲ್ಲ. ಇದೀಗ ವಿಚಾರಣೆಗೆ ದಿನಾಂಕ ನಿಗದಿಪಡಿಸಲಾಗಿದೆ.



Join Whatsapp