ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ ಪ್ರಕರಣ: ಮುರುಘಾ ಶ್ರೀ ಜಾಮೀನು ಅರ್ಜಿ ಸೆ.12ಕ್ಕೆ ಮುಂದೂಡಿಕೆ

Prasthutha|

ಚಿತ್ರದುರ್ಗ: ಪೋಕ್ಸೊ ಪ್ರಕರಣದಲ್ಲಿ ಬಂಧಿತರಾಗಿರುವ ಮೊದಲ ಆರೋಪಿ ಚಿತ್ರದುರ್ಗದ ಡಾ. ಶಿವಮೂರ್ತಿ ಮುರುಘಾ ಶರಣರು ಜಾಮೀನು ಮನವಿ ಹಾಗೂ ಉಳಿದ ಮೂವರು ಆರೋಪಿಗಳ ನಿರೀಕ್ಷಣಾ ಜಾಮೀನು ಮನವಿಯ ವಿಚಾರಣೆಯನ್ನು ಚಿತ್ರದುರ್ಗದ ವಿಶೇಷ ನ್ಯಾಯಾಲಯ ಸೆಪ್ಟೆಂಬರ್ 12ಕ್ಕೆ ಮುಂದೂಡಿದೆ.

- Advertisement -

ಸಂತ್ರಸ್ತರ ಪರವಾಗಿ ವಕೀಲರಾದ ಶ್ರೀನಿವಾಸ್ ಮತ್ತು ಮುಕುಂದ್, ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ನಾಗವೇಣಿ ಅವರು ಆಕ್ಷೇಪಣೆ ಸಲ್ಲಿಸಿದರು.

ವಾದ ಮಂಡಿಸಲು ವಿಶೇಷ ನ್ಯಾಯಾಧೀಶರಾದ ಬಿ ಕೆ ಕೋಮಲಾ ಅವರಿಂದ ಸರ್ಕಾರಿ ಅಭಿಯೋಜಕರಾದ ನಾಗವೇಣಿ ಕಾಲಾವಕಾಶ ಕೋರಿದರು. ಈ ಹಿನ್ನೆಲೆಯಲ್ಲಿ ನ್ಯಾಯಾಧೀಶರು ಸೆಪ್ಟೆಂಬರ್ 12ಕ್ಕೆ ದಿನಾಂಕ ನಿಗದಿಪಡಿಸಿ ವಿಚಾರಣೆ ಮುಂದೂಡಿದರು.

- Advertisement -

ಹಾಸ್ಟೆಲ್ ವಿದ್ಯಾರ್ಥಿನಿಯರಿಗೆ ಮುರುಘಾ ಶ್ರೀ ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂಬ ಆರೋಪದಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಈ ಆರೋಪದಲ್ಲಿ ಶ್ರೀಗಳನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.



Join Whatsapp