ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ 23ನೇ ಅವಧಿಯ ಮೇಯರ್, ಉಪಮೇಯರ್ ಹಾಗೂ ನಾಲ್ಕು ಸ್ಥಾಯಿ ಸಮಿತಿ ಸದಸ್ಯರುಗಳ ಚುನಾವಣೆಯನ್ನು ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ಇದೇ ಸೆ.09ರ ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ಮಂಗಳೂರು ಮಹಾನಗರ ಪಾಲಿಕೆಯ ಮಂಗಳಾ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಪಾಲಿಕೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- Advertisement -