2024ರ ಸಾರ್ವತ್ರಿಕ ಚುನಾವಣೆ: ನಿತೀಶ್, ಸೊರೋನ್ ಜೊತೆ ಮೈತ್ರಿ ಘೋಷಿಸಿದ ಮಮತಾ ಬ್ಯಾನರ್ಜಿ

Prasthutha|

ಕೊಲ್ಕತ್ತಾ: 2024ರಲ್ಲಿ ನಡೆಯುವ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಮತ್ತು ಇತರ ಪ್ರತಿಪಕ್ಷಗಳ ಜೊತೆ ಮೈತ್ರಿ ಮಾಡಿಕೊಳ್ಳುವುದಾಗಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಬ್ಯಾನರ್ಜಿ ಘೋಷಿಸಿದ್ದಾರೆ.

- Advertisement -

ಕೊಲ್ಕತ್ತಾ ದಲ್ಲಿ ನಡೆದ ಟಿಎಂಸಿಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 2024ರ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವ ಸಲುವಾಗಿ ನಿತೀಶ್ ಕುಮಾರ್, ಹೇಮಂತ್ ಸೊರೇನ್ ಮತ್ತು ಇತರ ಪಕ್ಷಗಳೊಂದಿಗೆ ಮೈತ್ರಿಗೆ ಯೋಜನೆ ರೂಪಿಸುವುದಾಗಿ ತಿಳಿಸಿದ್ದಾರೆ.

2024ರ ಚುನಾವಣೆಯಲ್ಲಿ ಗೆಲ್ಲಲು ಪ್ರತಿಪಕ್ಷಗಳು ತಮ್ಮ ಕ್ರಿಯಾಯೋಜನೆಯನ್ನು ರೂಪಿಸಲಿದೆ. ಬಿಜೆಪಿ 300 ಸ್ಥಾನಗಳನ್ನು ಹೊಂದಿದೆ ಎಂಬ ದುರಹಂಕಾರವು ಅದಕ್ಕೆ ಮುಳುವಾಗಲಿದೆ ಎಂದು ಬ್ಯಾನರ್ಜಿ ಭವಿಷ್ಯ ನುಡಿದರು.

- Advertisement -

ನಿತೀಶ್ ಕುಮಾರ್ ಅವರು ತನ್ನ ಮೂರು ದಿನಗಳ ನವದೆಹಲಿ ಭೇಟಿಯ ವೇಳೆ ರಾಹುಲ್ ಗಾಂಧಿ, ಶರದ್ ಪವಾರ್ ಸೇರಿದಂತೆ ಹಲವು ವಿಪಕ್ಷ ಮುಖಂಡರನ್ನು ಭೇಟಿಯಾದ ಬಳಿಕ ಮಮತಾ ಅವರಿಂದ ಈ ಹೇಳಿಕೆ ಹೊರಬಿದ್ದಿದೆ.

ಈ ಮಧ್ಯೆ ದ್ವಿಪಕ್ಷೀಯ ಭೇಟಿಗಾಗಿ ಭಾರತ ಪ್ರವಾಸದಲ್ಲಿರುವ ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ ಅವರನ್ನು ಭೇಟಿಯಾಗಲು ಅವಕಾಶ ನೀಡಲಾಗಿಲ್ಲ ಎಂದು ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.

ಬಾಂಗ್ಲಾದೇಶದ ಪ್ರಧಾನಿ ಅವರು ನನ್ನನ್ನು ಭೇಟಿಯಾಗಲು ಬಯಸಿದ್ದು ಇದೇ ಮೊದಲ ಬಾರಿಗೆ ನೋಡಿದ್ದೇನೆ ಎಂದ ಮಮತಾ ಬ್ಯಾನರ್ಜಿ, ಆದರೆ ಕೇಂದ್ರ ಸರ್ಕಾರ ನನ್ನ ಮೇಲೆ ಯಾಕೆ ಕೋಪಗೊಂಡಿದೆ ಎಂದು ನನಗೆ ತಿಳಿದಿಲ್ಲ ಎಂದು ತಿಳಿಸಿದ್ದಾರೆ.



Join Whatsapp