ಮುನ್ನಾರ್: ಬೆಕ್ಕಿಗೆ ಹುಲಿಯಂತೆ ಬಣ್ಣ ಬಳಿದು ಮಾರಾಟ ಮಾಡಲು ಯತ್ನಿಸಿದ ಯುವಕನನ್ನು ಪೊಲೀಸರು ಕೇರಳದ ಇಡುಕ್ಕಿಯಲ್ಲಿ ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ತಮಿಳುನಾಡಿನ ಅರಣಿ ನಿವಾಸಿ ಪಾರ್ಥಿಬನ್ ಎಂದು ಗುರುತಿಸಲಾಗಿದೆ.
ಹುಲಿ ಮರಿಗಳು ಮಾರಾಟಕ್ಕಿವೆ ಎಂದು ಪಾರ್ತಿಬನ್ ವಾಟ್ಸಾಪ್ ನಲ್ಲಿ ಸಂದೇಶ ಕಳುಹಿಸಿದ್ದು, ಪ್ರತಿ ಮರಿಗೆ 25 ಲಕ್ಷ ರೂಪಾಯಿ ನೀಡುವಂತೆ ಖರೀದಿದಾರರಿಗೆ ತಿಳಿಸಿದ್ದಾರೆ. ಈ ವಿಷಯ ತಿಳಿದ ಅರಣ್ಯಾಧಿಕಾರಿಗಳು ಇತನ ಮನೆಯಲ್ಲಿ ಹುಡುಕಾಟ ನಡೆಸಿದ್ದು, ಈ ವೇಳೆ ಹುಲಿಯಂತೆ ಬಣ್ಣ ಬಳಿದ ಬೆಕ್ಕುಗಳು ಪತ್ತೆಯಾಗಿವೆ. ಬಳಿಕ ಕೇರಳ ಪೊಲೀಸರು ಆತನನ್ನು ಬಂಧಿಸಿದ್ದಾರೆ.