ಮೂಡಿಗೆರೆ: ತಾಲೂಕಿನ ಎತ್ತಿನಭುಜ ವ್ಯಾಪ್ತಿಯಲ್ಲಿ ಆನೆಗಳು ಕಾಣಿಸಿಕೊಂಡಿರುವ ಹಿನ್ನಲೆ ಪ್ರಸಿದ್ಧ ಚಾರಣಕ್ಕೆ ಕರ್ನಾಟಕ ಅರಣ್ಯ ಇಲಾಖೆಯ ಚಿಕ್ಕಮಗಳೂರು ಪ್ರಾದೇಶಿಕ ವಿಭಾಗ ತಾತ್ಕಾಲಿಕವಾಗಿ ನಿಷೇಧ ಹೇರಿದೆ ಎಂದು ಮೂಡಿಗೆರೆ ವಲಯ ಅರಣ್ಯಾಧಿಕಾರಿ ಮೋಹನ್ ಕುಮಾರ್ ತಿಳಿಸಿದ್ದಾರೆ.
ಮಲೆನಾಡಿನ ಅನೇಕ ಗ್ರಾಮಗಳಲ್ಲಿ ನಿರಂತರ ಆನೆ ದಾಳಿ ನಡೆಯುತ್ತಿದ್ದು,ಜನರು ಆತಂಕಗೊಂಡಿದ್ದಾರೆ. ತಾಲೂಕಿನ ಕೆಲವು ಗ್ರಾಮಗಳಲ್ಲಿ ಆನೆ ಹಾವಳಿ ಹೆಚ್ಚಾಗಿದ್ದು, ಒರ್ವ ಕೂಲಿ ಕಾರ್ಮಿಕನನ್ನು ಕಾಲಿನಿಂದ ತುಳಿದು ಸ್ಥಳದಲ್ಲಿಯೇ ಕೊಂದು ಹಾಕಿರುವ ಘಟನೆ ನಡೆದಿದೆ. ಈ ಘಟನಾ ಸಂಬಂಧ ಸ್ಥಳೀಯರಿಂದ ವ್ಯಾಪಕ ವಿರೋಧ ವ್ಯಕ್ತವಾಗಿದ್ದು,ಸ್ಥಳೀಯರು ಮತ್ತು ಸಾರ್ವಜನಿಕರು ಮೃತ ದೇಹವನ್ನು ಮೂಡಿಗೆರೆ ಅರಣ್ಯ ಇಲಾಖೆ ಎದುರುಗಡೆ ಇಟ್ಟು ಪ್ರತಿಭಟನೆ ನಡೆಸಿದ್ದರು.
ಪ್ರತಿಭಟನೆ ತೀವ್ರಗೊಂಡ ಹಿನ್ನಲೆ, ಆನೆಯನ್ನು ಹಿಡಿಯುವ ಭರವಸೆ ಅರಣ್ಯ ಇಲಾಖೆಯಿಂದ ಸಿಕ್ಕಿದಂತಾಗಿದೆ. ಕಾಡಾನೆಗಳು ಈ ಭಾಗದಲ್ಲಿ ತಿರುಗಾಡುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಹಾಗೂ ಸ್ಥಳೀಯರ ಒತ್ತಾಯದ ಮೇರೆಗೆ ಹಾಗೂ ಮೇಲಧಿಕಾರಿಗಳ ನಿರ್ದೇಶನದಂತೆ ಎತ್ತಿನ ಭುಜ ಚಾರಣಕ್ಕೆ ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ.
,