ಟ್ರಕ್ ಗೆ ಬಸ್ ಡಿಕ್ಕಿ: 7 ಮಂದಿ ಸಾವು, ಹಲವರು ಗಂಭೀರ

Prasthutha|

ರಾಯ್ ಪುರ: ನಿಂತಿದ್ದ ಟ್ರಕ್ ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಏಳು ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿರುವ ಘಟನೆ ಛತ್ತೀಸಗಡದ ಕೊರಬಾ ಜಿಲ್ಲೆಯಲ್ಲಿ ಇಂದು ಮುಂಜಾನೆ ಸುಮಾರು 4 ಗಂಟೆಗೆ ನಡೆದಿದೆ.

- Advertisement -


ಪ್ರಾಥಮಿಕ ಮಾಹಿತಿಯಂತೆ, ಖಾಸಗಿ ಟ್ರಾವೆಲ್ಸ್ ಕಂಪನಿಗೆ ಸೇರಿದ ಬಸ್ ಛತ್ತೀಸಗಡ ರಾಜಧಾನಿ ರಾಯ್ ಪುರದಿಂದ ಸರ್ ಗುಜ ಜಿಲ್ಲೆಗೆ ಸಂಚರಿಸುತ್ತಿತ್ತು. ಮುಂಭಾಗದಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಚಾಲಕ ಯತ್ನಿಸುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ನಿಲ್ಲಿಸಿದ್ದ ಟ್ರಕ್ ಗೆ ಡಿಕ್ಕಿ ಹೊಡೆದು ಅವಘಡ ಸಂಭವಿಸಿದೆ ಎಂದು ಕೊರಬಾ ಪೊಲೀಸ್ ವರಿಷ್ಠಾಧಿಕಾರಿ ಸಂತೋಷ್ ಸಿಂಗ್ ತಿಳಿಸಿದ್ದಾರೆ.



Join Whatsapp