ಬೆಳ್ತಂಗಡಿ: ಹದಗೆಟ್ಟ ಗುರುವಾಯನಕೆರೆ ಬೆಳ್ತಂಗಡಿ ಮುಖ್ಯ ರಸ್ತೆಯನ್ನು ದುರಸ್ತಿಗೊಳಿಸಲು ಆಗ್ರಹಿಸಿ ಸೋಶಿಯಲ್ ಡೆಮಾಕ್ರೆಟಿಕ್ ಟ್ರೇಡ್ ಯೂನಿಯನ್ (SDTU) ಬೆಳ್ತಂಗಡಿ ಕ್ಷೇತ್ರ ಸಮಿತಿ ವತಿಯಿಂದ ಸೋಮವಾರ ಬೃಹತ್ ವಾಹನ ಜಾಥಾ ನಡೆಸಿದ್ದು, ಹೋರಾಟಕ್ಕೆ ಮಣಿದ ಅಧಿಕಾರಿಗಳು ರಾತ್ರೋ ರಾತ್ರಿ ರಸ್ತೆ ದುರಸ್ತಿಗೆ ಮುಂದಾಗಿದ್ದಾರೆ.
ನಿನ್ನೆ SDTU ಜಿಲ್ಲಾಧ್ಯಕ್ಷ ಝಾಕಿರ್ ಉಳ್ಳಾಲ್, ಜಿಲ್ಲಾ ಕಾರ್ಯದರ್ಶಿ ಯೂಸುಫ್ ಹಾಗೂ ಬೆಳ್ತಂಗಡಿ ಕ್ಷೇತ್ರ ಸಮಿತಿ ಅಧ್ಯಕ್ಷರ ನೇತೃತ್ವದಲ್ಲಿ ವಾಹನ ಜಾಥಾದ ಮೂಲಕ ಹದಗೆಟ್ಟ ರಸ್ತೆಯನ್ನು ಸರಿಪಡಿಸುವ ಸಲುವಾಗಿ ಬೆಳ್ತಂಗಡಿ ತಾಲೂಕಿನ ತಹಶಿಲ್ದಾರರಿಗೆ ಮನವಿ ಮಾಡಲಾಗಿತ್ತು.
SDTU ನಾಯಕರ ಮನವಿಗೆ ಸ್ಪಂದಿಸಿದ ಅಧಿಕಾರಿಗಳು ರಾತ್ರೋ ರಾತ್ರಿ ರಸ್ತೆ ದುರಸ್ತಿಯ ಕೆಲಸ ಪ್ರಾರಂಭಿಸಿದ್ದು, SDTU ನಡೆಸಿದ ಹೋರಾಟಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.