ರಾಜ್ಯದಲ್ಲಿ ಒಟ್ಟು 3484 ಸಶಸ್ತ್ರ ಪೊಲೀಸ್ ಕಾನ್ಸ್ ಟೆಬಲ್ ಹುದ್ದೆಗಳ ಭರ್ತಿ: ಗೃಹ ಸಚಿವ ಆರಗ ಜ್ಞಾನೇಂದ್ರ

Prasthutha|

ಬೆಂಗಳೂರು: ರಾಜ್ಯದಲ್ಲಿ  ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಶಸ್ತ್ರ ಪಡೆಗಳ ಕಾನ್ಸ್ ಸ್ಟೆಬಲ್ ಹುದ್ದೆಗಳನ್ನು, ಭರ್ತಿ ಮಾಡಲಾಗುತ್ತಿದ್ದು, ಪ್ರಪ್ರಥಮ ಬಾರಿಗೆ, ಪುರುಷ ತೃತೀಯ ಲಿಂಗಿ ಸಮುದಾಯದ 79 ಅಭ್ಯರ್ಥಿಗಳನ್ನು ಒಳಗೊಂಡಂತೆ ಒಟ್ಟು 3484 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಈ ಎಲ್ಲಾ ಹುದ್ದೆಗಳನ್ನು ಅತ್ಯಂತ ಪಾರದರ್ಶಕವಾಗಿ ಆಯ್ಕೆ ಮಾಡಲಾಗುತ್ತಿದ್ದು, ಅಕ್ಟೋಬರ್ ತಿಂಗಳ 31 ನೆ ತಾರೀಖು ಅರ್ಜಿಗಳನ್ನು ಆನ್ ಲೈ ನ್ ನಲ್ಲಿ ಸಲ್ಲಿಸಲು ಕೊನೆಯ ದಿನಾಂಕ ವಾಗಿರುತ್ತದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

- Advertisement -

ಈ ಕುರಿತು ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ 371J ಮೀಸಲಾತಿ ಯಂತೆ ಒಟ್ಟು 420 ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಇದರಲ್ಲಿ 11 ಪುರುಷ ತೃತೀಯ ಲಿಂಗಿ ಗಳಿಗೆ ಮೀಸಲಾಗಿದೆ ಎಂದು ತಿಳಿಸಿದರು.

ರಾಜ್ಯದ ಇತರ ಭಾಗಗಳಲ್ಲಿ ಒಟ್ಟು 3064 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, 68 ಹುದ್ದೆಗಳು ತೃತೀಯ ಲಿಂಗಿ ಪುರುಷರಿಗೆ ಮೀಸಲಾತಿ ನೀಡಲಾಗಿದೆ.

- Advertisement -

ರಾಜ್ಯದಲ್ಲಿ ಪೊಲೀಸ್ ಇಲಾಖೆಯ ಎಲ್ಲಾ ವಿಭಾಗಗಳಲ್ಲಿ ಒಟ್ಟು ಒಂದು ಲಕ್ಷಕ್ಕೂ ಹೆಚ್ಚು ಹುದ್ದೆಗಳಲ್ಲಿ  ಸುಮಾರು 16000 ಹುದ್ದೆಗಳು ಭರ್ತಿಯಾಗಬೇಕಿದೆ ಎಂದರು.

ನೇಮಕಾತಿ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿ ನಡೆಯಲಿದ್ದು, ಅಭ್ಯರ್ಥಿಗಳು, ಯಾವುದೇ ಅಕ್ರಮಗಳ ಅಥವಾ ವಾಮಮಾರ್ಗದ ಮೂಲಕ ಹುದ್ದೆಗಳನ್ನು ಪಡೆಯಲು ಯತ್ನಿಸಿದರೆ, ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.



Join Whatsapp