ಕೊಹಿನೂರ್ ವಜ್ರವನ್ನು ಬ್ರಿಟನ್ ನಿಂದ ವಾಪಸ್ ತರಿಸಿ: ರಾಷ್ಟ್ರಪತಿಗೆ ಮನವಿ

Prasthutha|

ಭುವನೇಶ್ವರ: ಕೊಹಿನೂರ್ ವಜ್ರವು ಜಗನ್ನಾಥ ದೇವಸ್ಥಾನಕ್ಕೆ ಸೇರಿದ್ದು, ಬ್ರಿಟನ್ ನಿಂದ ಅದನ್ನು ವಾಪಸು ತರಿಸಿ ಎಂದು ಒಡಿಶಾದ ಸಾಮಾಜಿಕ-ಸಾಂಸ್ಕೃತಿಕ ಸಂಸ್ಥೆ ರಾಷ್ಟ್ರಪತಿಗೆ ಮನವಿ ಮಾಡಿದೆ.

- Advertisement -

ರಾಣಿ ಎಲಿಜಬೆತ್-2 ನಿಧನ ನಂತರ, ಆಕೆಯ ಹಿರಿಯ ಪುತ್ರ ಪ್ರಿನ್ಸ್ ಚಾರ್ಲ್ಸ್ ಬ್ರಿಟನ್ ರಾಜನಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ನಿಯಮಗಳ ಪ್ರಕಾರ, 105 ಕ್ಯಾರೆಟ್ ವಜ್ರವಿರುವ ಕಿರೀಟವನ್ನು ಚಾರ್ಲ್ಸ್ ಪತ್ನಿ ಕಾರ್ನ್ವಾಲ್ ಕ್ಯಾಮಿಲ್ಲಾ ಅವರು ಧರಿಸಲಿದ್ದಾರೆ.
12ನೇ ಶತಮಾನದ ದೇಗುಲಕ್ಕೆ ಕೊಹಿನೂರ್ ವಜ್ರವನ್ನು ಮರಳಿ ತರುವ ಪ್ರಕ್ರಿಯೆಯನ್ನು ಸುಗಮಗೊಳಿಸಲು ಮಧ್ಯಸ್ಥಿಕೆ ವಹಿಸುವಂತೆ ಕೋರಿ ರಾಷ್ಟ್ರಪತಿಗಳಿಗೆ ಜ್ಞಾಪಕ ಪತ್ರವನ್ನು ಸಲ್ಲಿಸಲಾಗಿದೆ.



Join Whatsapp