ರಸ್ತೆ ಅಪಘಾತ: ಮಂಗಳೂರು ಮೂಲದ ದಂತ ವೈದ್ಯೆ ಸಾವು

Prasthutha|

ಮಂಗಳೂರು: ಮಂಗಳೂರು ಮೂಲದ ದಂತ ವೈದ್ಯೆಯೊಬ್ಬರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಪುಣೆಯ ಪಿಂಪ್ರಿಯಲ್ಲಿ ನಡೆದಿದೆ.

- Advertisement -

ಮೂಲತಃ ಮಂಗಳೂರಿನ ವೆಲೆನ್ಸಿಯ ನಿವಾಸಿ, ಪುಣೆಯ ಪಿಂಪ್ರಿಯಲ್ಲಿ ದಂತ ವೈದ್ಯೆಯಾಗಿದ್ದ ಜಿಶಾ ಜೋನ್ (27) ಮೃತಪಟ್ಟವರು ಎಂದು ತಿಳಿದು ಬಂದಿದೆ,

ಸೆ. 12ರಂದು ಜಿಶಾ ಅವರು ಮನೆಗೆ ಸ್ಕೂಟರ್ ನಲ್ಲಿ ಹಿಂದಿರುಗುವಾಗ ಟ್ರಕ್ ಢಿಕ್ಕಿ ಹೊಡೆದು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಜಿಶಾ ಅವರ ಪತಿ ಪುಣೆಯಲ್ಲಿ ಉದ್ಯಮಿಯಾಗಿದ್ದರಿಂದ ಅವರು ಪುಣೆಯಲ್ಲಿ ನೆಲೆಸಿದ್ದರು.



Join Whatsapp