ಬೆಂಗಳೂರು: ಮಗನನ್ನು ಕೊಂದು ತಾಯಿಯೂ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಹೊಸಗುಡ್ಡದ ಹಳ್ಳಿಯಲ್ಲಿ ಇಂದು ಮುಂಜಾನೆ ನಡೆದಿದೆ.
ಹೊಸಗುಡ್ಡದ ಹಳ್ಳಿಯ 13 ವರ್ಷದ ಮಗ ಮದನ್ ಗೆ ನೇಣು ಬಿಗಿದ ಬಳಿಕ ತಾಯಿ 48 ವರ್ಷದ ಲಕ್ಷ್ಮಮ್ಮ ಅವರೂ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಡಿಸಿಪಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.
ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.
ಘಟನಾ ಸ್ಥಳಕ್ಕೆ ಬ್ಯಾಟರಾಯನಪುರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.
ಪೊಲೀಸರ ತನಿಖೆಯಿಂದಷ್ಟೇ ಆತ್ಮಹತ್ಯೆಗೆ ಕಾರಣ ತಿಳಿದು ಬರಬೇಕಿದೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.