ಕೊಲ್ಕತ್ತಾ: ಮಂಗಳವಾರ ಕೊಲ್ಕತ್ತಾದಲ್ಲಿ ಬಿಜೆಪಿ ಪ್ರತಿಭಟನೆ ಹಿಂಸಾತ್ಮಕ ರೂಪಕ್ಕೆ ತಿರುಗಿದ್ದು, ಪೊಲೀಸ್ ವಾಹನಕ್ಕೆ ತನ್ನ ಕಾರ್ಯಕರ್ತರು ಬೆಂಕಿ ಹಚ್ಚಿಲ್ಲ ಎಂದು ಬಿಜೆಪಿ ಸಮರ್ಥಿಸಿಕೊಂಡಿದೆ. ಆದರೆ ಈ ಕುರಿತು ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ವೀಡಿಯೋವನ್ನು ಟ್ವೀಟ್ ಮಾಡಿದ್ದು, ಇದರಲ್ಲಿ ಕೇಸರಿ ಬಟ್ಟೆ ಧರಿಸಿದ ಒಬ್ಬ ವ್ಯಕ್ತಿ ಪೊಲೀಸ್ ವಾಹನದ ಸೀಟ್ ಗೆ ಬೆಂಕಿ ಹಚ್ಚಿದ್ದಾನೆ.
ಪಶ್ಚಿಮ ಬಂಗಾಳದಲ್ಲಿ ಯಾವ ಪಕ್ಷದ ‘ರಾಷ್ಟ್ರೀಯ ದಂಗೆಕೋರರು’ ಪೊಲೀಸ್ ಜೀಪುಗಳನ್ನು ಸುಡುತ್ತಿದ್ದಾರೆ ಎಂದು ನಿಮಗೆ ತಿಳಿದಿದೆಯೇ? ಎಂದು ಬಿ.ವಿ. ಶ್ರೀನಿವಾಸ್ ಟ್ವೀಟ್ ಮಾಡಿದ್ದಾರೆ.