ಮಸ್ಕತ್ | ಏರ್ ಇಂಡಿಯಾ ವಿಮಾನದಲ್ಲಿ ಕಾಣಿಸಿಕೊಂಡ ಬೆಂಕಿ

Prasthutha|

ನವದೆಹಲಿ: ಮಸ್ಕತ್ ನಿಂದ ಕೊಚ್ಚಿಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಬೆಂಕಿ ಕಾಣಸಿಕೊಂಡಿದ್ದು, ತುರ್ತು ಭೂಸ್ಪರ್ಶ ಮಾಡಲಾಗಿದೆ.

- Advertisement -


ಬುಧವಾರ ಬೆಳಗ್ಗೆ ಕೇರಳದ ಕೊಚ್ಚಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಸ್ಕತ್ ಏರ್ಪೋರ್ಟ್ ನಲ್ಲಿ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ.


ವಿಮಾನದಲ್ಲಿದ್ದ ಎಲ್ಲಾ ಸಿಬ್ಬಂದಿ ಮತ್ತು 145 ಪ್ರಯಾಣಿಕರಿಗೆ ಯಾವುದೇ ಗಾಯವಾಗಿಲ್ಲ ಹಾಗೂ ಅವರನ್ನು ಟರ್ಮಿನಲ್ ಕಟ್ಟಡಕ್ಕೆ ಸ್ಥಳಾಂತರಿಸಲಾಗಿದೆ ಎಂದು ತಿಳಿದು ಬಂದಿದೆ.



Join Whatsapp