ಬೆಂಗಳೂರು: ವಿಧಾನ ಪರಿಷತ್ನಲ್ಲಿ ಇಂದು ಪ್ರಶೋತ್ತರ ಕಲಾಪ ನಂತರ ಮತಾಂತರ ನಿಷೇಧ ವಿಧೇಯಕ ಮಂಡನೆಯಾಗುವ ಸಾಧ್ಯತೆಯಿದ್ದು, ಗೃಹ ಸಚಿವ ಆರಗ ಜ್ಞಾನೇಂದ್ರ ವಿಧೇಯಕವನ್ನು ಮಂಡಿಸಲಿದ್ದಾರೆ ಎಂದು ತಿಳಿದು ಬಂದಿದೆ.
ಚಾಮರಾಜಪೇಟೆಯಲ್ಲಿರುವ ಕೇಶವಕೃಪಾದಲ್ಲಿ ವಿಧೇಯಕ ಮಂಡನೆ ವೇಳೆ ಪ್ರಬಲವಾಗಿ ಸಮರ್ಥಿಸಿಕೊಳ್ಳುವ ಬಗ್ಗೆ ಸುದೀರ್ಘ ಚರ್ಚೆ ನಡೆದಿದೆ ಎಂದು ವರದಿಯಾಗಿದೆ.
ಮತಾಂತರ ನಿಷೇಧ ವಿಧೇಯಕಕ್ಕೆ ಈಗಾಗಲೇ ವಿಧಾನಸಭೆಯಲ್ಲಿ ಅನುಮೋದನೆ ದೊರೆತಿದೆ. ಆದರೆ ವಿಧಾನ ಪರಿಷತ್ನಲ್ಲಿ ಈವರೆಗೆ ಮಸೂದೆಯನ್ನು ಸರ್ಕಾರ ಮಂಡಿಸಿಲ್ಲ. ಮಸೂದೆ ಮಂಡಿಸುವ ತಡವಾದ ಹಿನ್ನೆಲೆಯಲ್ಲಿ ಸುಗ್ರೀವಾಜ್ಞೆಯ ಮೂಲಕ ಕಾಯ್ದೆಯನ್ನು ಸರ್ಕಾರ ಜಾರಿಗೆ ತಂದಿತ್ತು.
ಪ್ರಸ್ತುತ ವಿಧಾನ ಪರಿಷತ್ನಲ್ಲಿ ಕಾಂಗ್ರೆಸ್ನ 26 ಮತ್ತು ಜೆಡಿಎಸ್ನ 8 ಸದಸ್ಯರಿದ್ದು, ಬಿಜೆಪಿ ಸದಸ್ಯರ ಸಂಖ್ಯಾ ಬಲ (41)ಹೆಚ್ಚಿರುವ ಕಾರಣ ಸೂಕ್ತ ಸಮಯದಲ್ಲಿ ವಿಧೇಯಕ ಮಂಡನೆಗೆ ಆರೆಸ್ಸೆಸ್ ಸೂಚಿಸಿದೆ ಎಂದು ವರದಿಯಾಗಿದೆ.