ಮದ್ಯ ನೀತಿ ಹಗರಣ: ಮಂಗಳೂರು ಸೇರಿ 40 ಕಡೆ ಇಡಿ ದಾಳಿ

Prasthutha|

ನವದೆಹಲಿ: ದೆಹಲಿ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಮಂಗಳೂರು, ಬೆಂಗಳೂರು, ಚೆನ್ನೈ ಸೇರಿದಂತೆ 40 ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಶುಕ್ರವಾರ ಬೆಳಿಗ್ಗೆ  ದಾಳಿ ನಡೆಸಿ, ಶೋಧಕಾರ್ಯ ಕೈಗೊಂಡಿದ್ದಾರೆ.

- Advertisement -

2021ರಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್​​ ಸರ್ಕಾರ ದೆಹಲಿಯಲ್ಲಿ ನೂತನ ಅಬಕಾರಿ ನೀತಿ ಜಾರಿಗೆ ತಂದಿದ್ದು, ಇದರಲ್ಲಿ ದೊಡ್ಡ ಮಟ್ಟದ ಹಗರಣ ನಡೆದಿದೆ ಎಂಬ ಮಾತು ಕೇಳಿ ಬಂದಿತ್ತು. ಹೀಗಾಗಿ, ಜಾರಿ ನಿರ್ದೇಶನಾಲಯ ತನಿಖೆ ಕೈಗೆತ್ತಿಕೊಂಡಿದೆ. ಇದರ ಬೆನ್ನಲ್ಲೇ ಈ ನೂತನ ಅಬಕಾರಿ ನೀತಿಯನ್ನ ಆಪ್​ ಹಿಂಪಡೆದುಕೊಂಡಿದೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಕೆಲ ದಿನಗಳ ಹಿಂದೆ ಜಾರಿ ನಿರ್ದೇಶನಾಲಯ ದೆಹಲಿ, ಹರಿಯಾಣ ಸೇರಿದಂತೆ 35ಕ್ಕೂ ಅಧಿಕ ಸ್ಥಳಗಳ ಮೇಲೆ ದಾಳಿ ನಡೆಸಿತ್ತು. ಇದೀಗ ಮತ್ತೊಮ್ಮೆ ದಾಳಿ ಕೈಗೊಂಡಿದೆ.

- Advertisement -

ಪ್ರಕರಣದಲ್ಲಿ ದೆಹಲಿ ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಹೆಸರು ಕೇಳಿ ಬಂದಿದ್ದು, ಈಗಾಗಲೇ ಹಲವು ಬಾರಿ ಅವರನ್ನು ವಿಚಾರಣೆಗೊಳಪಡಿಸಲಾಗಿತ್ತು.



Join Whatsapp