ಕಟ್ಟಡದಿಂದ ಬಿದ್ದು ಬಾಲಕಿ ಮೃತ್ಯು: ಲಿಂಗಾಯತ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಿಸಿದ ಮುಸ್ಲಿಮರು

Prasthutha|

ಬೆಳಗಾವಿ: ಕಟ್ಟಡದಿಂದ ಆಯತಪ್ಪಿ ಕೆಳಗಡೆ ಬಿದ್ದು ಮೃತಪಟ್ಟಿದ್ದ ಬಾಲಕಿಯ ಅಂತ್ಯಕ್ರಿಯೆ ನೆರವೇರಿಸುವ ಮೂಲಕ ಮುಸ್ಲಿಮ್ ಮುಖಂಡರು ಮಾನವೀಯತೆ ಮೆರೆದ ಘಟನೆ ಬೆಳಗಾವಿಯಲ್ಲಿ ನಡೆದಿದೆ.

- Advertisement -

ವಿದ್ಯಾಶ್ರೀ ಹೆಗಡೆ (10) ಮೃತಪಟ್ಟ ಬಾಲಕಿ ಎಂದು ತಿಳಿದು ಬಂದಿದೆ.

ವಿದ್ಯಾಶ್ರೀ ಉಡುಪಿ ಮೂಲದವರಾಗಿದ್ದು, ಕೆಲ ವರ್ಷಗಳಿಂದ ಇಲ್ಲಿನ ವೀರಭದ್ರೇಶ್ವರ ನಗರದಲ್ಲಿ ತಾಯಿಯಿಂದಿಗೆ ವಾಸವಾಗಿದ್ದಳು. ಗುರುವಾರ ಬೆಳಿಗ್ಗೆ ಮಹಡಿ ಮೇಲೆ ಹತ್ತಿ ಹೂವು ಕೀಳಲು ಹೋದ ಸಂದರ್ಭದಲ್ಲಿ ಆಯತಪ್ಪಿ ಕೆಳಗೆ ಬಿದ್ದಿದ್ದಾಳೆ. ತೀವ್ರ ಗಾಯಗೊಂಡಿದ್ದ ಬಾಲಕಿಯನ್ನು ಇಲ್ಲಿನ ಮುಸ್ಲಿಮ್ ಯುವಕರು ಕೆಎಲ್ ಇ ಸಂಸ್ಥೆಯ ಡಾ.ಪ್ರಭಾಕರ ಕೋರೆ ಆಸ್ಪತ್ರೆಗೆ ಸೇರಿದ್ದರು. ಆದರೆ, ಚಿಕಿತ್ಸೆ ಫಲಿಸದೇ ಬಾಲಕಿ ಕೊನೆಯುಸಿರೆಳೆದಿದ್ದಳು.

- Advertisement -

ಆಸ್ಪತ್ರೆ ವೆಚ್ಚ ಭರಿಸಲು ತಾಯಿಗೆ ಸಾಧ್ಯವಾಗದ ಕಾರಣ, ವೀರಭದ್ರೇಶ್ವರ ನಗರದ ಕೆಲ ಮುಸ್ಲಿಮ್ ಮುಖಂಡರೇ ವೆಚ್ಚ ಭರಿಸಿದರು. ನಂತರ ಬಾಲಕಿ ಶವವನ್ನು ಮನೆಗೆ ತಂದು, ಅಂತ್ಯಸಂಸ್ಕಾರಕ್ಕೂ ವ್ಯವಸ್ಥೆ ಮಾಡಿದರು. ಮುಸ್ಲಿಮ್ ಮುಖಂಡರ ಮಾನವೀಯ ಕಾರ್ಯಕ್ಕೆ ಸಾರ್ವಜನಿಕರಿಂದ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.



Join Whatsapp