ಬೆಂಗಳೂರು: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಯಜನ್ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಹೂಗುಚ್ಚ ನೀಡಿ ಸ್ವಾಗತಿಸಿದರು.
ತಿರುವನಂತಪುರದಲ್ಲಿ ಇತ್ತೀಚೆಗೆ ದಕ್ಷಿಣ ಭಾರತದ ರಾಜ್ಯಗಳ ಮುಖ್ಯಮಂತ್ರಿಗಳನ್ನೊಳಗೊಂಡ ದಕ್ಷಿಣ ವಲಯದ ಸಮಿತಿ ಸಭೆ ನಡೆಸಲಾಗಿತ್ತು. ಇದರ ಮುಂದುವರಿದ ಭಾಗವಾಗಿ ಉಭಯ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆದಿದೆ. ಎರಡು ರೈಲು ಯೋಜನೆಗಳ ಕುರಿತು ಸಭೆಯಲ್ಲಿ ಚರ್ಚಿಸಲಾಗುತ್ತದೆ’ ಎಂದು ಕೇರಳ ಮುಖ್ಯಮಂತ್ರಿಯವರ ಕಾರ್ಯಾಲಯ ಹೇಳಿದೆ.
ಈ ಸಂದರ್ಭದಲ್ಲಿ ವಸತಿ ಸಚಿವ ವಿ ಸೋಮಣ್ಣ, ಕೇರಳ ಹಾಗೂ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಅಧಿಕಾರಿಗಳು ಹಾಜರಿದ್ದರು.
ತಲಶ್ಶೇರಿ–ಮೈಸೂರು ಹಾಗೂ ನಿಲಂಬೂರು–ನಂಜನಗೂಡು ರೈಲ್ವೆ ಯೋಜನೆಯ ಅನುಷ್ಠಾನದ ಕುರಿತು ಉಭಯ ನಾಯಕರು ಚರ್ಚಿಸುವ ನಿರೀಕ್ಷೆ ಇದೆ. ತಿರುವನಂತಪುರ–ಕಾಸರಗೋಡು ಸೆಮಿ ಹೈ–ಸ್ಪೀಡ್ ರೈಲು ಮಾರ್ಗ ಹಾಗೂ ಸಿಲ್ವರ್ ಮಾರ್ಗವನ್ನು ಮಂಗಳೂರಿನವರೆಗೂ ವಿಸ್ತರಿಸುವ ಸಂಬಂಧ ಕೇರಳ ಸರ್ಕಾರ ಪ್ರಸ್ತಾವನೆ ಸಿದ್ಧಪಡಿಸಿದ್ದು, ಈ ಕುರಿತೂ ಚರ್ಚೆ ನಡೆಸಿರುವ ಸಾಧ್ಯತೆ ಇದೆ ಎನ್ನಲಾಗಿದೆ.