ಆರೋಪಿ ಲಾಕಪ್ ಡೆತ್: ಠಾಣೆಗೆ ನುಗ್ಗಿ ಪೊಲೀಸರ ಮೇಲೆ ಗುಂಪು ದಾಳಿ: 7 ಪೊಲೀಸರಿಗೆ ಗಾಯ

Prasthutha|

ಕಟಿಹಾರ್: ಆರೋಪಿಯೊಬ್ಬ ಪೊಲೀಸ್ ಕಸ್ಟಡಿಯಲ್ಲಿ ಸಾವಿಗೀಡಾಗಿದ್ದು, ಗ್ರಾಮಸ್ಥರ ಗುಂಪೊಂದು ಠಾಣೆಗೆ ನುಗ್ಗಿ ಪೊಲೀಸರ ಮೇಲೆ ಗುಂಪು ದಾಳಿ ನಡೆಸಿದ ಘಟನೆ ಬಿಹಾರದ ಕಟಿಹಾರ್ ಜಿಲ್ಲೆಯ ಪ್ರಾಣಪುರ ಪೊಲೀಸ್ ಠಾಣೆಯಲ್ಲಿ ನಡೆದಿದೆ. ದಾಳಿಯ ಪರಿಣಾಮ ಕನಿಷ್ಠ ಏಳು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ.

- Advertisement -

ಅಮ್ರೋಲ್ ನಿವಾಸಿಯಾದ ಪ್ರಮೋದ್ ಎಂಬಾತನನ್ನು ಶುಕ್ರವಾರ ಶುಕ್ರವಾರ ರಾತ್ರಿ ಮದ್ಯ ಕಳ್ಳಸಾಗಣೆ ಆರೋಪದ ಮೇಲೆ ಪೊಲೀಸರು ಬಂಧಿಸಿದ್ದು, ಶನಿವಾರ ಬೆಳಿಗ್ಗೆ ಪೊಲೀಸ್ ಠಾಣೆಯಲ್ಲಿ ಆತ ಮೃತಪಟ್ಟಿರುತ್ತಾನೆ. ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ದೊಡ್ಡ ಸಂಖ್ಯೆಯಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆಸಿದರು ಮತ್ತು ಪೊಲೀಸ್ ಠಾಣೆಯನ್ನು ಧ್ವಂಸಗೊಳಿಸಿದರು ಎನ್ನಲಾಗಿದೆ. ಪೊಲೀಸರು ಪ್ರಮೋದ್ ನನ್ನು ತೀವ್ರವಾಗಿ ಥಳಿಸಿದ ಕಾರಣದಿಂದ ಆತ ಸಾವನ್ನಪ್ಪಿದ್ದಾನೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ ಮತ್ತು ಗಾಯಗೊಂಡ ಪೊಲೀಸ್ ಸಿಬ್ಬಂದಿಯನ್ನು ಚಿಕಿತ್ಸೆಗಾಗಿ ಕಟಿಹಾರ್ ಸದರ್ ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -

ಗ್ರಾಮಸ್ಥರನ್ನು ನಿಯಂತ್ರಿಸಲು ಪೊಲೀಸರ ಅಸಾಧ್ಯವಾದ ಹಿನ್ನೆಲೆಯಲ್ಲಿ ಹತ್ತಿರದ ಪೊಲೀಸ್ ಠಾಣೆಗಳಿಂದ ಹೆಚ್ಚುವರಿ ಭದ್ರತಾ ಸಿಬ್ಬಂದಿಯನ್ನು ಕರೆಸಿದ ನಂತರವೇ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಸಾಧ್ಯವಾಯಿತು. ವರದಿಗಳ ಪ್ರಕಾರ, ಘಟನೆಯಲ್ಲಿ ಇಬ್ಬರು ಸ್ಟೇಷನ್ ಹೌಸ್ ಅಧಿಕಾರಿಗಳು (ಎಸ್ಎಚ್ಒಗಳು) ಸೇರಿದಂತೆ ಏಳು ಪೊಲೀಸರು ಗಾಯಗೊಂಡಿದ್ದಾರೆ. ಪ್ರಮೋದ್ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಕಟಿಹಾರ್ ಸದರ್ ಆಸ್ಪತ್ರೆಗೆ ಕಳುಹಿಸಲಾಗಿದೆ.



Join Whatsapp