ಹಿರಿಯ ಅಥ್ಲೀಟ್ ಪೂವಮ್ಮಗೆ ಎರಡು ವರ್ಷ ನಿಷೇಧ

Prasthutha|

ಹೊಸದಿಲ್ಲಿ:  ಹಿರಿಯ ಅಥ್ಲೀಟ್, ಏಷ್ಯನ್ ಗೇಮ್ಸ್ ಪದಕ ವಿಜೇತೆ ಎಂ ಆರ್ ಪೂವಮ್ಮ ಅವರು ಉದ್ದೀಪನ ಮದ್ದು ಸೇವನೆ ಹಿನ್ನೆಲೆ 2 ವರ್ಷ ನಿಷೇಧಕ್ಕೆ ಒಳಗಾಗಿದ್ದಾರೆ.

- Advertisement -

ಕಳೆದ ವರ್ಷ ಫೆಬ್ರವರಿ 18 ರಂದು ಪಟಿಯಾಲದಲ್ಲಿ ನಡೆದ ಇಂಡಿಯನ್ ಗ್ರ್ಯಾಂಡ್ ಪ್ರಿಕ್ಸ್ ಸಮಯದಲ್ಲಿ ಪೂವಮ್ಮ ಅವರ ಡೋಪ್ ಮಾದರಿಯನ್ನು ಸಂಗ್ರಹಿಸಲಾಗಿದ್ದು, ವಿಶ್ವ ಡೋಪಿಂಗ್ ವಿರೋಧಿ ಸಂಸ್ಥೆ ರದ್ದು ಮಾಡಿದ್ದ ಉತ್ತೇಜಕ ಮೀಥೈಲ್‌ ಹೆಕ್ಸಾನಿಯಮೈನ್‌  ತೆಗೆದುಕೊಂಡಿದ್ದು ಪಾಸಿಟಿವ್ ಬಂದ ಹಿನ್ನೆಲೆ ಈ ವರ್ಷದ ಜೂನ್‌ನಲ್ಲಿ ಅವರಿಗೆ ಎಡಿಎಪಿ ಮೂರು ತಿಂಗಳ ನಿಷೇಧ ಶಿಕ್ಷೆ ವಿಧಿಸಿತ್ತು . ಅಂದಿನಿಂದ ಅವರು ಸ್ಪರ್ಧಿಸಿದ್ದ ಎಲ್ಲ ಫಲಿತಾಂಶಗಳನ್ನು ಅಮಾನ್ಯಗೊಳಿಸಲಾಗುತ್ತದೆ. ಗೆದ್ದ ಪದಕಗಳನ್ನೂ ಮುಟ್ಟುಗೋಲು ಹಾಕಿಕೊಳ್ಳಲಾಗುವುದು ಎಂದು ಎಡಿಎಪಿ ಮುಖ್ಯಸ್ಥ ಅಭಿನವ್ ಮುಖರ್ಜಿ ತಿಳಿಸಿದ್ದಾರೆ.

ಆದರೆ ಈ ಆದೇಶವನ್ನು ಪ್ರಶ್ನಿಸಿ ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಘಟಕ (NADA) ಮೇಲ್ಮನವಿ ಸಲ್ಲಿಸಿತ್ತು. ಈ ಮನವಿಯನ್ನು ಪುರಸ್ಕರಿಸಿರುವ ಎಡಿಎಪಿ ಶಿಕ್ಷೆಯನ್ನು ಎರಡು ವರ್ಷಕ್ಕೆ ವಿಸ್ತರಿಸಿದೆ.




Join Whatsapp