ಸರ್ಕಾರದ ಲಂಚದ ಆಸೆಗೆ ಬಲಿಪಶುಗಳಾದ ಪದವೀಧರ ವಿದ್ಯಾರ್ಥಿಗಳು: ಕಾಂಗ್ರೆಸ್

Prasthutha|

ಬೆಂಗಳೂರು: ರಾಜ್ಯದಲ್ಲಿ ಖಾಲಿಯಿರುವ ಸರ್ಕಾರಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ, ರಾಜ್ಯ ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷಿಗಳ ಒಕ್ಕೂಟದ ನೇತೃತ್ವದಲ್ಲಿ ನೂರಾರು ಪದವೀಧರರು ನಗರದ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿದ್ದಾರೆ.

- Advertisement -

ರಾಜ್ಯದಲ್ಲಿ 2.5 ಲಕ್ಷಕ್ಕೂ ಹೆಚ್ಚಿನ ಉದ್ಯೋಗಗಳು ಖಾಲಿಯಿದ್ದರೂ ಸರ್ಕಾರ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳುವಲ್ಲಿ ಸರ್ಕಾರವು ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿರುವ ಪ್ರತಿಭಟನಕಾರರು ‘ಲಂಚ ತೆಗೆದುಕೊಳ್ಳಿ ಕೆಲಸ ಕೊಡಿ’ ಎಂದು ಕವರ್‌ನಲ್ಲಿ ಬರೆದು ವಿಭಿನ್ನವಾಗಿ ಪ್ರತಿಭಟಿಸಿದರು.

ಈ ಬಗ್ಗೆ ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್, ಉದ್ಯೋಗಾಕಾಂಕ್ಷಿಗಳ ಬಳಿ ಪುಸ್ತಕ, ಪೆನ್ನು, ಭವಿಷ್ಯದ ಕನಸು ಬಿಟ್ಟರೆ ಬೇರೇನೂ ಇಲ್ಲ. ಸರ್ಕಾರಕ್ಕೆ ಲಂಚದ ಆಸೆ, ಕಮಿಷನ್ ಲಾಲಸೆ ಬಿಟ್ಟರೆ ಬೇರೇನೂ ಇಲ್ಲ ಎಂದು ಟೀಕಿಸಿದೆ.

- Advertisement -

40 ಪರ್ಸೆಂಟ್ ಸರ್ಕಾರ ನಡೆಸಿದ PSI ಅಕ್ರಮದಿಂದಾಗಿ ಪ್ರಾಮಾಣಿಕ ಅಭ್ಯರ್ಥಿಗಳ ವಯಸ್ಸು ಮೀರುತ್ತಿದೆ, ಬದುಕು ಛಿದ್ರವಾಗಿದೆ. ಇವರ ಆತಂತ್ರದ ಬದುಕಿಗೆ ಪರಿಹಾರವೇನು ಎಂದು ಕಾಂಗ್ರೆಸ್ ಸಿ ಎಂ ಬೊಮ್ಮಾಯಿಯವರನ್ನು ಪ್ರಶ್ನಿಸಿದೆ.




Join Whatsapp