ಬೆಂಗಳೂರು: ಕೆಎಸ್ ಆರ್ ಟಿಸಿ ನಿರ್ವಾಹಕರೊಬ್ಬರು ಕರ್ತವ್ಯದಲ್ಲಿ ನಿರತರಾಗಿರುವಾಗಲೇ ಹಾಡು ಹಾಡಿದ್ದು, ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ವೈರಲ್ ಆಗಿದೆ.
ಹೊಗೆನಕಲ್ ಗೆ ತೆರಳುತ್ತಿದ್ದ ಬಸ್ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹೇಮಂತ್ ಎಂಬುವರು ‘ನಿನ್ನ ಕಂಗಳ ಬಿಸಿಯ ಹನಿಗಳು’ ಎಂಬ ಗೀತೆ ಹಾಡಿದ್ದು, ಪ್ರಯಾಣಿಕರು ಚಿತ್ರೀಕರಿಸಿದ್ದಾರೆ.
ಸದ್ಯ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನೆಟ್ಟಿಗರು ನಿರ್ವಾಹಕನ ಹಾಡಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.