ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಅ.17 ರಂದು ಮತದಾನ: ವೇಳಾಪಟ್ಟಿ ಬಿಡುಗಡೆ

Prasthutha|

ನವದೆಹಲಿ: ಕಾಂಗ್ರೆಸ್ ಪಕ್ಷದ ಅಧ್ಯಕ್ಷರ ಆಯ್ಕೆಗೆ ಚುನಾವಣೆಯ ವೇಳಾಪಟ್ಟಿ ಇಂದು ಬಿಡುಗಡೆಯಾಗಿದ್ದು, ಅ.17 ರಂದು ಮತದಾನ ನಡೆಯಲಿದೆ.

- Advertisement -


ಚುನಾವಣೆ ಅಧಿಸೂಚನೆ ಇಂದಿನಿಂದಲೇ (ಸೆ.22) ಜಾರಿಯಾಗಿದ್ದು, ಸೆ. 24 ರಿಂದ 30 ರವರೆಗೆ ನಾಮಪತ್ರ ಸಲ್ಲಿಸಲು ಅವಕಾಶವಿದೆ. ಅ.1ರಂದು ನಾಮಪತ್ರಗಳ ಪರಿಶೀಲನೆ ಕಾರ್ಯ ನಡೆಲಿದೆ. ಕ್ರಮ ಬದ್ಧವಾಗಿರುವ ಅಭ್ಯರ್ಥಿಗಳ ಪಟ್ಟಿಯನ್ನು ಅಂದು ಘೋಷಿಸಲಾಗುತ್ತದೆ. ನಾಮಪತ್ರ ಹಿಂಪಡೆಯಲು ಅ. 8 ಕೊನೆ ದಿನವಾಗಿದ್ದು, ಕಣದಲ್ಲಿ ಉಳಿಯಲಿರುವ ಅಭ್ಯರ್ಥಿಗಳ ಪಟ್ಟಿ ಅದೇ ದಿನ ಬಿಡುಗಡೆ ಮಾಡಲಾಗುತ್ತದೆ.
ಅ.17 ರಂದು ಮತದಾನ ನಡಯಲಿದ್ದು, ಅ. 19ರಂದು ಎಐಸಿಸಿ ಕೇಂದ್ರ ಕಚೇರಿಯಲ್ಲಿ ಚುನಾವಣಾ ಫಲಿತಾಂಶ ಘೋಷಣೆಯಾಗಲಿದೆ.

Join Whatsapp