ಭಾರತೀಯ ರೈಲ್ವೆ ಇಲಾಖೆಯಲ್ಲಿ ಕೆಲಸಗಿಟ್ಟಿಸಿದ 10 ತಿಂಗಳ ಹೆಣ್ಣು ಮಗು !

Prasthutha|

ದುರ್ಗ್ : ಭಾರತೀಯ ರೈಲ್ವೆ ಇಲಾಖೆಯು ಕೇವಲ 10 ತಿಂಗಳ ಹೆಣ್ಣು ಮಗುವಿಗೆ ಅನುಕಂಪದ ಆಧಾರದಲ್ಲಿ ಉದ್ಯೋಗ ನೀಡಿದೆ.
ರಾಧಿಕಾ ಕೆಲಸಗಿಟ್ಟಿಸಿದ 10 ತಿಂಗಳ ಹೆಣ್ಣು ಮಗು ಎಂದು ತಿಳಿದು ಬಂದಿದೆ.

- Advertisement -


ರಾಧಿಕಾಳ ತಂದೆ ರಾಜೇಂದ್ರ ಕುಮಾರ್ ಯಾದವ್ ಅವರು ರೈಲ್ವೆ ಇಲಾಖೆಯಲ್ಲಿ ಸಹಾಯಕರಾಗಿ ಕೆಲಸ ಮಾಡುತ್ತಿದ್ದರು. ಜೂನ್ 1ರಂದು ರಾಜೇಂದ್ರ ಕುಮಾರ್ ಮತ್ತು ಅವರ ಪತ್ನಿ ಮಂಜು ಯಾದವ್ ತಮ್ಮ ಮಗುವಿನ ಜೊತೆ ಮಂದಿರ ಹಸೌದ್ ನಿಂದ ಭಿಲಾಯ್ ಗೆ ಬರುತ್ತಿದ್ದಾಗ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಅಪಘಾತದ ಸಂದರ್ಭದಲ್ಲಿ ಮಗು ರಾಧಿಕಾ ಅಚ್ಚರಿ ರೀತಿಯಲ್ಲಿ ಬದುಕುಳಿದಿದ್ದಳು. ತಂದೆ-ತಾಯಿಯ ಸಾವಿನ ನಂತರ ರಾಧಿಕಾಳನ್ನು ಅಜ್ಜಿಯೇ ಪಾಲನೆ ಮಾಡುತ್ತಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.


ಮಗುವಿಗೆ 18 ವರ್ಷ ತುಂಬಿದ ಬಳಿಕ ಅನುಕಂಪದ ಆಧಾರದ ಮೇಲೆ ಇಲಾಖೆಯಲ್ಲಿ ಕೆಲಸ ನೀಡಲಾಗುವುದು. ಇದಕ್ಕಾಗಿ ಮಗುವಿನ ದಾಖಲಾತಿ ಪ್ರಕ್ರಿಯೆ ರೈಲ್ವೆ ಇಲಾಖೆಯಿಂದ ನಡೆದಿದೆ ಎಂದು ಹಿರಿಯ ವಿಭಾಗೀಯ ಸಿಬ್ಬಂದಿ ಉದಯ್ ಕುಮಾರ್ ಹೇಳಿದ್ದಾರೆ.



Join Whatsapp