ಬೆಂಗಳೂರು: ಚಾಲಕನ ನಿರ್ಲಕ್ಷ್ಯಕ್ಕೆ 4 ವರ್ಷದ ಬಾಲಕ ಪ್ರಾಣ ಕಳೆದುಕೊಂಡ ದುರಂತ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.ಬೆಂಗಳೂರಿನ ಊರ್ವಶಿ ಥಿಯೇಟರ್ ಸಮೀಪ ಈ ಅಪಘಾತ ಸಂಭವಿಸಿದೆ.
ಅಶ್ವಿತ್ ಮೃತ ಬಾಲಕ. ಕ್ಯಾಂಟರ್ ಚಾಲಕನ ಎಡವಟ್ಟಿಗೆ ಈ ಅನಾಹುತ ನಡೆದಿದೆ ಎನ್ನಲಾಗಿದೆ.
ಟ್ಯಾಂಕರ್ ವಾಹನವನ್ನು ರಿವರ್ಸ್ ತೆಗೆಯುವಾಗ ಅಶ್ವಿತ್‌ಗೆ ಡಿಕ್ಕಿ ಹೊಡೆದಿದೆ. ನಂತರ ಕೆಳಗೆ ಬಿದ್ದ ಅಶ್ವಿತ್ ಟೈಯರ್‌ನಡಿ ಸಿಲುಕಿದ್ದು, ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಕುಟುಂಬಸ್ಥರ ರೋದನ ಮುಗಿಲು ಮುಟ್ಟಿದೆ.
ಸ್ಥಳಕ್ಕೆ ಕಲಾಸಿಪಾಳ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ.
ಘಟನೆ ಸಂಬಂಧ ಪ್ರಕರಣ ದಾಖಲಾಗಿದೆ.