Home ಟಾಪ್ ಸುದ್ದಿಗಳು ಮಂಡ್ಯದಲ್ಲಿ ಪಾಕ್ ಪರ ಘೋಷಣೆ ಕೂಗಿದ್ದ ಬಿಜೆಪಿ ಕಾರ್ಯಕರ್ತ ಪೊಲೀಸ್ ವಶ

ಮಂಡ್ಯದಲ್ಲಿ ಪಾಕ್ ಪರ ಘೋಷಣೆ ಕೂಗಿದ್ದ ಬಿಜೆಪಿ ಕಾರ್ಯಕರ್ತ ಪೊಲೀಸ್ ವಶ

ಮಂಡ್ಯ: 2022ರಲ್ಲಿ ಮಂಡ್ಯದಲ್ಲಿ ನಡೆದಿದ್ದ ಪ್ರತಿಭಟನೆ ವೇಳೆ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ್ದ ಬಿಜೆಪಿ ಕಾರ್ಯಕರ್ತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪಾಕಿಸ್ತಾನ ವಿದೇಶಾಂಗ ಸಚಿವ ಅವಹೇಳನಕಾರಿಯಾಗಿ ಮಾತನಾಡಿದ್ದನ್ನು ಖಂಡಿಸಿ 2022ರಲ್ಲಿ ಮಂಡ್ಯದ ಸಂಜಯ್ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಬಿಜೆಪಿ ಕಾರ್ಯಕರ್ತ ರುಪಾಕಿಸ್ತಾನ ಮುರ್ದಾಬಾದ್, ಹಿಂದೂಸ್ತಾನ್ ಜಿಂದಾಬಾದ್ ಘೋಷಣೆ ಕೂಗುತ್ತಿದ್ದರು. ಘೋಷಣೆ ಕೂಗುವ ಬರದಲ್ಲಿ ಕಾರ್ಯಕರ್ತ ರವಿ ಎನ್ನುವವರು ಗೊಂದಲದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ್ದಾರೆ. ತಕ್ಷಣ ಅರವಿಂದ ಎಂಬ ಕಾರ್ಯಕರ್ತ ರವಿ ಬಾಯಿ ಮುಚ್ಚಿದ್ದರು. ಎರಡು ವರ್ಷಗಳ ಬಳಿಕ ಈ ಘಟನೆ ಸಂಬಂಧ ಕಾಂಗ್ರೆಸ್ ರವಿ ಮೇಲೆ ದೂರು ಸಲ್ಲಿಸಿದೆ. ದೂರಿನ ಹಿನ್ನೆಲೆಯಲ್ಲಿ ಮಂಡ್ಯ ಪಶ್ಚಿಮ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇದೀಗ ಬಿಜೆಪಿ ಕಾರ್ಯಕರ್ತ ರವಿಯನ್ನು ವಶಕ್ಕೆ ಪಡೆದಿದ್ದಾರೆ.

Join Whatsapp
Exit mobile version